ಕಾನೂನುಬಾಹಿರವಾಗಿ ಮಸೀದಿಗೆ ಮಂಜೂರು ಮಾಡಿದ ಜಾಗ ವಾಪಾಸ್ ಪಡೆದ ಸರಕಾರ

12:54 AM, Saturday, June 26th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

masjidಉಡುಪಿ : ವಕ್ಫ್ ಬೋರ್ಡ್ ಮೂಲಕ 2018ರಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೊಡವೂರು ಪಳ್ಳಿಜಿಡ್ಡದ ಕಲ್ಮತ್ ಮಸೀದಿಗೆ ಮಂಜೂರು ಮಾಡಲಾದ ಕೊಡವೂರು ಗ್ರಾಮದ ಸರ್ವೆ ನಂ 53/6ರಲ್ಲಿ 0.67 ಸೆಂಟ್ಸ್ ಜಾಗವನ್ನು ವಾಪಸ್  ಪಡೆದು ಜೂ.22ರಂದು ಸರಕಾರದ ಹೆಸರಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ್ ಸೂಚನೆ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಸಲ್ಲಿಸಿರುವ ವರದಿಯಂತೆ ಮರಳಿ ವಶಕ್ಕೆ ಪಡೆಯಲಾಗಿದೆ.

ಮಸೀದಿಗೆ ಈ ಜಾಗವನ್ನು ಮಂಜೂರು ಮಾಡಿರುವ ಬಗ್ಗೆ ಸ್ಥಳೀಯವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಂದಾಯ ಸಚಿವರನ್ನು ಭೇಟಿಯಾಗಿ ಸ್ಥಳೀಯ ಸ್ಥಿತಿಗತಿಯನ್ನು ಮನವರಿಕೆ ಮಾಡಿ ಈ ಜಾಗವನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಲಾಗಿದ್ದು, ಅದನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ಮನವಿ ಮಾಡಿದ್ದೆ. ಅದರಂತೆ ಸಚಿವರ ಸೂಚನೆ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಸಲ್ಲಿಸಿರುವ ಸ್ಥಳೀಯ ಸ್ಥಿತಿಗತಿಗಳ ವರದಿಯನ್ನು ಸಲ್ಲಿಸಿದ್ದರು ಎಂದು ರಘುಪತಿ ಭಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2018ರಲ್ಲಿ ಅಂದಿನ ಜಿಲ್ಲಾಧಿಕಾರಿ ಯವರು ಈ ಜಾಗವನ್ನು ವಕ್ಫ್ ಬೋರ್ಡ್ ಮುಖೇನ ಕಲ್ಮತ್ ಮಸೀದಿ ಇವರ ಹೆಸರಿಗೆ ಮಂಜೂರು ಮಾಡಲು ಶಿಫಾರಸು ಮಾಡಿದ್ದರು. ಈ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ನಾವು ಸಲ್ಲಿಸಿದ ಮನವಿಗೆ ತಕ್ಷಣ ಸ್ಪಂದಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಜಾಗವನ್ನು ಮರಳಿ ಸರಕಾರದ ವಶಕ್ಕೆ ಪಡೆಯುವಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಕಂದಾಯ ಸಚಿವರಿಗೆ ಕೃತಜ್ಞತೆಗಳು ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English