ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 512 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ನಡೆದ ನಾಡಪ್ರಭುಗಳ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಅಂಚೆ ಚೀಟಿಯನ್ನು ಲೋಕಾರ್ಪಣೆಗೊಳಿಸಿದರು.
ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಹಿನ್ನೆಲೆ, ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ. ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ. ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ ಆ ಧೀಮಂತ ಆಡಳಿತಗಾರನಿಗೆ ಅನಂತ ಪ್ರಣಾಮ ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.
ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ,ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀ ಚಂದ್ರಶೇಖರ ಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್,ಸಚಿವರಾದ ಕೆ.ಗೋಪಾಲಯ್ಯ ಹಾಗೂ ನಾರಾಯಣಗೌಡ, ಶಾಸಕ ಮುನಿರತ್ನ, ಸಂಸದ ಪಿ.ಸಿ.ಮೋಹನ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English