ಜೂನ್ 28 ರಿಂದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

10:17 PM, Sunday, June 27th, 2021
Share
1 Star2 Stars3 Stars4 Stars5 Stars
(No Ratings Yet)
Loading...

Jog falls ಶಿವಮೊಗ್ಗ: ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ.

ಕಳೆದ ಒಂದು ವಾರದಿಂದ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯು ಜೋಗ ಜಲಪಾತದ ಸೊಬಗು ಹೆಚ್ಚಿಸಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ.

ಲಾಕ್‌ಡೌನ್‌ ಕಾರಣದಿಂದಾಗಿ ಪ್ರವಾಸಿಗರಿಲ್ಲದೇ ಸ್ಥಳೀಯ ವ್ಯಾಪಾರ, ವಹಿವಾಟು ಕುಂಠಿತಗೊಂಡಿತ್ತು. ಇದೀಗ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಲಾಗಿದ್ದು, ಮತ್ತೆ ಆರ್ಥಿಕ ವಹಿವಾಟು ಗರಿಗೆದರಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English