ಮಂಗಳೂರು : ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಆಧರಿಸಿ ಮೂಡಬಿದ್ರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ. ಈ ಘಟನೆಯು ಮೂಡಬಿದ್ರೆ ತಾಲೂಕಿನ ಹೊಸ್ಮಾರು ನೆಲ್ಲಿಕಾರು ಪ್ರದೇಶದ ಬಳಿ ಬೆಳಕಿಗೆ ಬಂದಿದೆ.
ಪೊಲೀಸರು ತಪಾಸಣೆ ನಡೆಸಿದಾಗ, ಒಂದು ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಮೂರು ಜಾನುವಾರುಗಳನ್ನು ಸಾಗಿಸಲಾಗುತ್ತಿರುವುದು ದೃಢಪಟ್ಟಿದೆ. ಜಾನುವಾರು ಸಾಗಾಟಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಆರೋಪಿಗಳು ಹೊಂದಿರಲಿಲ್ಲ ಎಂದು ವರದಿಯಾಗಿದೆ.
ಈ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ತಕ್ಷಣ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮನ್ಸೂರ್ ಅದ್ಯಪಾಡಿ ಯಾನೆ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ಫಕ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂದು ಗುರುತಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶ ನೀಡಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









