ಸುಳ್ಯ: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾಗಿರುವ ನವೀನ್ ಕುಮಾರ್, ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್ ಕುಮಾರ್ ಕಟೀಲ್, ಸಹೋದರಿ ನಂದಿನಿಯವರನ್ನು ಅಗಲಿದ್ದಾರೆ. ನವೀನ್ ಕುಮಾರ್ ಅವರು ಕೃಷಿಕ ರಾಗಿದ್ದರು ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.
ಸಂತಾಪ
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ಶ್ರೀ ನವೀನ್ ಕುಮಾರ್ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ನವೀನ್ ಕುಮಾರ್ ಕೃಷಿಕ ರಾಗಿದ್ದರೂ ಸಾಮಾಜಿಕ ಕಳಕಳಿ ಹೊಂದಿದ ಸಜ್ಜನ ವ್ಯಕ್ತಿಯಾಗಿದ್ದರು. ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನವೀನ್ ಕುಮಾರ್ ಅವರ ಆಗಲಿಕೆ ದುರಾದೃಷ್ಟಕರ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English