ಬಂಟ್ವಾಳ : ವಿಧ್ಯಾಭ್ಯಾಸ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಹೊಸ ಸವಾಲುಗಳನ್ನು ಸ್ವೀಕರಿಸಿ ವಿದ್ಯಾರ್ಥಿಗಳು ಜೀವನ ರೂಪಿಸಬೇಕು ಎಂದು ಟ್ಯಾಬ್ಲೆಟ್ ಪಿಸಿಗಳನ್ನು ಸರಕಾರ ಉಚಿತವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಮಂಗಳವಾರ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಹಾಗೂ ಕೋವಿಡ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಜನರ ಜೀವನ ಹಾಗೂ ಜೀವನಕೋಸ್ಕರ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಲಸಿಕಾ ಕಾರ್ಯ ನಡೆಸುತ್ತಿದ್ದು, ಅಮೇರಿಕಾವನ್ನೂ ಹಿಂದಿಕ್ಕಿ ಲಸಿಕಾ ನೀಡುವ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಪಾಲಿಟೆಕ್ನಿಕ್ ಪ್ರಾಂಶುಪಾಲ ಭರತ್ ಜೆ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ, ಕಾಲೇಜು ಅಧೀಕ್ಷಕಿ ಒಪಿಲಿಯಾ ಡಿಸೋಜ, ಮೆಕ್ಯಾನಿಕಲ್ ವಿಭಾಗದ ವಿಭಾಗಾಧಿಕಾರಿ ಡಾ.ದೇವರಾಜ್ ನಾಯ್ಕ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿ ಡೊಂಬಯ್ಯ ಅರಳ ಉಪಸ್ಥಿತರಿದ್ದರು.
ಪ್ರಾಧ್ಯಾಪಕರಾದ ಭಾಸ್ಕರ್ ಸ್ವಾಗತಿಸಿದರು.ಚಿತ್ರಕುಮಾರ್ ವಂದಿಸಿದರು. ನವೀನ್ ಜಿ.ಸಿ. ಕಾರ್ಯಕ್ರಮ ನಿರ್ವಹಿಸಿದರು.
Click this button or press Ctrl+G to toggle between Kannada and English