ಕೇರಳದಲ್ಲಿ ಅಧಿಕೃತವಾಗಿ ಸ್ಥಳನಾಮ ಬದಲಾಗುತ್ತಿಲ್ಲ. ಆದರೆ ಅನಧಿಕೃತವಾಗಿ ಬದಲಾವಣೆ ಆಗುತ್ತಿದೆ

12:19 AM, Wednesday, June 30th, 2021
Share
1 Star2 Stars3 Stars4 Stars5 Stars
(No Ratings Yet)
Loading...

Ashrafಕಾಸರಗೋಡು  : ಕಾಸರಗೋಡಿನಲ್ಲಿ ಅಧಿಕೃತವಾಗಿ ಸ್ಥಳನಾಮ ಬದಲಾಗುತ್ತಿಲ್ಲ. ಆದರೆ ಅನಧಿಕೃತವಾಗಿ ಸ್ಥಳನಾಮಗಳು ಈಗಾಗಲೇ ಬದಲಾವಣೆಯ ಪ್ರಕ್ರಿಯೆಗಳು ಆರಂಭವಾಗಿದೆ. ಕಾಸರಗೋಡಿನ  ಗ್ರಾಮ ಕಚೇರಿ ಗಳಿಂದ ಆನ್‌ಲೈನ್ ಮೂಲಕ ನೀಡುವ ಸರ್ಟಿಫಿಕೇಟ್‌ಗಳ ಮೇಲೆ ದಪ್ಪ ಅಕ್ಷರದಲ್ಲಿ ಮುದ್ರಿತವಾಗುವ ಗ್ರಾಮಗಳ ಹೆಸರು ಹೆಚ್ಚಿನ ಕಡೆಯಲ್ಲೂ ಬದಲಾವಣೆ ಆಗಿದೆ. ಸ್ವತಃ ಜಿಲ್ಲಾಧಿಕಾರಿಗಳ ಕಚೇರಿಯಿಂದ ನಿರ್ವಹಿಸಲ್ಪಡುವ ಜಿಲ್ಲಾ ವೆಬ್‌ಸೈಟ್‌ನಲ್ಲಿ ಕೂಡ ಗ್ರಾಮಗಳ ಹೆಸರಿನಲ್ಲಿ ಬದಲಾವಣೆಗಳನ್ನು ಕಾಣಬಹುದು. ಮಾತ್ರವಲ್ಲ ಲಕ್ಷಾಂತರ ಕನ್ನಡಿಗರು ಬಳಸುವ ಪಡಿತರ ಪುಸ್ತಕದಲ್ಲಿಯೂ ಗ್ರಾಮಗಳ ಹೆಸರು ಬದಲಾವಣೆಯಾಗಿದೆ. ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆ ನೀಡುವ ಅರ್ಜಿ ಫಾರಂಗಳಲ್ಲಿ ಗ್ರಾಮಗಳ ಹೆಸರುಗಳನ್ನು ಮಲಯಾಳೀಕರಣಗೊಳಿಸಿ ತಪ್ಪು ಅಕ್ಷರಗಳಿಂದ ಮುದ್ರಿಸಲಾಗಿದೆ.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜೆಡಿಯಸ್ ಮುಖಂಡ ಹೆಚ್ ಡಿ  ಕುಮಾರ ಸ್ವಾಮಿ ಯವರು ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳ ಕನ್ನಡದ ಹೆಸರುಗಳನ್ನು ಬದಲಾಯಿಸುವವುದನ್ನು ಕೈ ಬಿಡಬೇಕು ಎನ್ನುವುದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿ ಮಾಡಿದ ನಂತರ ಮಂಜೇಶ್ವರದ ಶಾಸಕ ಎಕೆಎಮ್ ಅಶ್ರಫ್ ಈ  ಕುರಿತು ಹೇಳಿಕೆ ನೀಡಿದ್ದಾರೆ.

ಕೇರಳ ವಿಧಾನ ಸಭೆಯಲ್ಲಿ ಮಂಜೇಶ್ವರದ ಶಾಸಕನೆಂಬ ನೆಲೆಯಲ್ಲಿ ಕೆಲವು ವಿಚಾರಗಳನ್ನು ನಿಮ್ಮ ಮುಂದಿಡುತ್ತೇನೆ. ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರುಗಳು ಈ ವಿಚಾರದಲ್ಲಿ ಟ್ಟೀಟ್ ಮಾಡುವ ಮೂಲಕ ಚರ್ಚೆ ಮಹತ್ವ ಪಡೆದುಕೊಂಡಿದೆ. ಕರ್ನಾಟಕದ ಗಡಿ ಅಭಿವೃದ್ಧಿ ಪ್ರಾಧಿಕಾರವು ಈ ವಿಚಾರದಲ್ಲಿ ಮನವಿಯನ್ನು ನೀಡಿರುವುದು ಈ ಎಲ್ಲಾ ಚರ್ಚೆಗೆ ಕಾರಣವಾಯಿತು.

ಈ ಬಗ್ಗೆ ಕೇರಳ ಮುಖ್ಯ ಮಂತ್ರಿ ಅವರ ಕಛೇರಿಯನ್ನು ಮತ್ತು ಅವರ ಪಿ ಎ ಅವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಲಾಯಿತು. ಕಾಸರಗೋಡು ಜಿಲ್ಲಾಧಿಕಾರಿ ಅವರಲ್ಲಿ ಪೋನ್ ಮ‌ೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ. ಈ ಎಲ್ಲಾ ಮಾಹಿತಿ ಪ್ರಕಾರ ಸ್ಥಳ ನಾಮ ಬದಲಾವಣೆ ಬಗ್ಗೆ ಹೊರ ಬರುವ ವಿಚಾರಗಳು ವಾಸ್ತವ ವಿರುದ್ಧ. ಇಂತಹ ಯಾವುದೇ ಸುತ್ತೋಲೆ ಕೇರಳ ಸರಕಾರ ಹೊರಡಿಸಲಿಲ್ಲ.ಅಂತಹ ಯಾವುದೇ ಯೋಚನೆಯು ಸರಕಾರದ ಮುಂದಿಲ್ಲ. ಆದರೆ ರೇಶನ್ ಕಾರ್ಡ್ ನಲ್ಲಿ ಸಾಪ್ಟ್ ವೇರ್ ಕಾರಣದಿಂದ ಕೆಲವು ಹೆಸರುಗಳಲ್ಲಿ ಬದಲಾವಣೆ ಆಗಿರುವುದು ಸತ್ಯ. ಆದರೆ ಇದು ತಾಂತ್ರಿಕ ಕಾರಣದಿಂದ ಉಂಟಾದ ಲೋಪ.ಇದನ್ನು ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅಧಿಕೃತವಾಗಿ ಯಾವುದೇ ಸುತ್ತೋಲೆ ಇಲ್ಲದೆ ಕೇವಲ ಸಾಮಾಜಿಕ ಜಾಲತಾಣದಲ್ಲಿ ಬರುವ ಸುದ್ದಿಗಳ ಆಧಾರದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಕುಮಾರಸ್ವಾಮಿ ಮಾಡಿರುವ ಟ್ವೀಟ್,ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿದ ಹೇಳಿಕೆ ಜನರಲ್ಲಿ ಗೊಂದಲ ಉಂಟುಮಾಡಿದೆ.ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ನೀಡಿದ ಅನಗತ್ಯ ಹೇಳಿಕೆಯು ವಿಷಾದನೀಯ.ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಪರವಾಗಿ ಕೆಲವು ಪೂರಕ ಕ್ರಮಗಳನ್ನು ಕೇರಳದಲ್ಲಿ ಎಲ್ಲಾ ಸರಕಾರಗಳು ಕೈಗೊಂಡಿದೆ. ಭಾಷಾ ಅಲ್ಪಸಂಖ್ಯಾತರಿಗೆ ಸಮಸ್ಯೆ ಆಗುವ ವಿಚಾರಗಳನ್ನು ಸರಕಾರದ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸುವ ವಾತಾವರಣ ಕೇರಳದಲ್ಲಿದೆ. ಪರಿಹಾರವಾಗಬೇಕಾದ ಸಮಸ್ಯೆಗಳು ಇನ್ನೂ ಇರುವುದು ವಾಸ್ತವ. ಇದನ್ನು ಸಂಘಟಿತ ಪ್ರಯತ್ನದಿಂದ ಪರಿಹರಿಸಲು ಸಾಧ್ಯವಾಗುವ ವಾತಾವರಣ ನಿರ್ಮಾಣವಾಗಬೇಕು.ನಾಡಿನ ಭಾಷಾ ಸಾಮರಸ್ಯವನ್ನು, ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು.

ಮಂಜೇಶ್ವರದ ಶಾಸಕ ಹಾಗೂ ಒಬ್ಬ ಅಪ್ಪಟ ಕನ್ನಡಿಗನೆಂಬ ನೆಲೆಯಲ್ಲಿ ಕಾಸರಗೋಡಿನ ಯಾವುದೇ ಪ್ರದೇಶದ ಸ್ಥಳನಾಮವನ್ನು ಬದಲಾಯಿಸುವ ಷಡ್ಯಂತ್ರವೋ, ಸರಕಾರದ ಅದೇಶವೆನಾದರೂ ಬಂದರೆ ಆದರ ವಿರುದ್ದದ ಹೋರಾಟಕ್ಕೆ ನೇತೃತ್ವ ನೀಡಲು ನಾನು ಸಿದ್ಧ.ಕನ್ನಡ ಅಲ್ಪಸಂಖ್ಯಾತರ ಸಂವಿಧಾನ ಬದ್ಧ ಹಕ್ಕುಗಳ ಸಂರಕ್ಷಣೆಯಲ್ಲಿ ಸದಾ ಜಾಗೃತನಾಗಿರುತ್ತೇನೆ. ಎಂದು ಫೇಸ್ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸ್ಥಳೀಯರ ಪ್ರಕಾರ ಇದೊಂದು ಜನರನ್ನು ಸುಮ್ಮನಾಗಿಸುವ ಪ್ರಯತ್ನ. ಕೇರಳ ಸರ್ಕಾರ ಯಾವುದೇ ಅಧಿಕೃತ ಸುತ್ತೋಲೆ ಹೊಡದಿಸದೆನೇ  ಭಾಷಾ ತಾರತಮ್ಯ ನಡೆಯುತ್ತಿದೆ. ಇಲ್ಲಿನ ಸ್ಥಳೀಯ ಭಾಷಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಪದೇ ಪದೇ ಮನವಿ ಸಲ್ಲಿಕೆ, ಪ್ರತಿಭಟನೆಗಳು ನಡೆದರೂ ಇದುವರೆಗೂ ಸರ್ಕಾರದ ಇದೆ ರೀತಿ ಹೇಳುತ್ತಲೇ ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English