ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಗಣ್ಯರ ಸಂತಾಪ

8:20 PM, Friday, July 2nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

haldodderi-sudhindraಬೆಂಗಳೂರು  : ಖ್ಯಾತ ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಮನೋಜ್ಞವಾಗಿ ಬರೆಯುತ್ತಿದ್ದ ಕೆಲವೇ ಬರಹಗಾರರಲ್ಲಿ ಒಬ್ಬರಾಗಿದ್ದರು.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಚಿವರಾದ ಕೆ.ಎಸ್.ಈಶ್ವರಪ್ಪರವರ ತೀವ್ರ ಶೋಕ

ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ  ನಿಧನಕ್ಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಅವರಿಗೆ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಡಾ . ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ, ಅಭಿನಂದನೆ ತಿಳಿಸಬೇಕಾದ ಸಂದರ್ಭದಲ್ಲಿ ಸಂತಾಪ ಹೇಳಬೇಕಾದ ಸಂಕಟ ಎಂದಿರುವ ಸಚಿವರು. ಕನ್ನಡ ವಿಜ್ಞಾನ ಸಾಹಿತ್ಯಕ್ಕೆ ಅವರ ಕೊಡುಗೆ ಅನನ್ಯವಾದದ್ದು , ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಅವರು ಜನಪ್ರಿಯರಾಗಿದ್ದರು.

ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

 ಸಚಿವ ಅರವಿಂದ ಲಿಂಬಾವಳಿ ಶೋಕ

ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ , ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಅವರಿಗೆ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಡಾ . ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ, ಅಭಿನಂದನೆ ಹೇಳಬೇಕಾದ ಕಡೆ ಸಂತಾಪ ಹೇಳಬೇಕಾದ ಸಂಕಟ ಎಂದಿರುವ ಸಚಿವ ಅರವಿಂದ ಲಿಂಬಾವಳಿ, ಕನ್ನಡ ವಿಜ್ಞಾನ ಸಾಹಿತ್ಯಕ್ಕೆ ಸುಧೀಂದ್ರ ಹಾಲ್ದೊಡ್ಡೇರಿ ಅವರ ಕೊಡುಗೆ ಅನನ್ಯವಾದದ್ದು , ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಅವರು ಜನಪ್ರಿಯರಾಗಿದ್ದರು.

ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ 22 ವರ್ಷ ಸೇವೆ ಸಲ್ಲಿಸಿದ್ದ ಅವರು ನಂತರ ಸ್ವಯಂನಿವೃತ್ತಿ ಪಡೆದು ಜೈನ್ ವಿಶ್ವವಿದ್ಯಾಲಯದಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಬರೆಯುವ ಕಲೆ ಅವರಿಗೆ ಕರಗತವಾಗಿತ್ತು ಅವರ ನಿಧನದಿಂದ ಕನ್ನಡ ಅಕ್ಷರ ಲೋಕ ಒಬ್ಬ ಅತ್ಯುತ್ತಮ ಲೇಖಕರನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English