ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಟರ್ಪಾಲ್ ಗಳ ವಿತರಣೆ

7:02 PM, Saturday, July 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Shillekyataಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜು.3ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 20 ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಟರ್ಪಾಲ್ ಗಳನ್ನು  ವಿತರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ ತೌಖ್ಯ ಚಂಡಮಾರುತದ ಪ್ರಭಾವದಿಂದಾಗಿ ಅಲೆಮಾರಿ ಶಿಳ್ಳಕ್ಯಾತ ಕುಟುಂಬದ ಗುಡಿಸಲುಗಳ ಟರ್ಪಾಲ್ ಗಳು ತೀವ್ರವಾಗಿ ಹಾನಿಯಾಗಿದ್ದವು. ಜಿಲ್ಲೆಯಲ್ಲಿ ಮುಂಗಾರು ಮಳೆಯೂ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಈ ಸಮುದಾಯದವರಿಗೆ 20*30 (350 GSM) .ಅಳತೆಯ ಟರ್ಪಾಲ್ ಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English