ಉಪವಿದ್ಯುತ್ ವಿತರಣಾ ಕೇಂದ್ರಗಳ ತ್ವರಿತ ನಿರ್ಮಾಣಕ್ಕೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ

7:53 PM, Saturday, July 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

karajola ಬೆಂಗಳೂರು : ಸಮರ್ಪಕ ವಿದ್ಯುತ್ ವಿತರಣೆಗಾಗಿ ಈಗಾಗಲೇ ಮಂಜೂರಾಗಿರುವ ಉಪವಿದ್ಯುತ್ ವಿತರಣೆ ಕೇಂದ್ರಗಳ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಪ್ರಾರಂಭಿಸಿ, ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದಲ್ಲಿಂದು ನಡೆದ ಬಾಗಲಕೋಟೆ ಪ್ರಸರಣ ವಲಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈ ವಲಯದಲ್ಲಿ ಒಟ್ಟು ೪೧೬ ಉಪ ವಿದ್ಯುತ್ ವಿತರಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ೧೩೫ ಉಪ ವಿದ್ಯುತ್ ವಿತರಣಾ ಕೇಂದ್ರಗಳು ಮಂಜೂರಾಗಿವೆ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು ೨೧ ಉಪವಿದ್ಯುತ್ ವಿತರಣಾ ಕೇಂದ್ರಗಳು ಮಂಜೂರಾಗಿದ್ದು, ಬೆನಕಟ್ಟಿ ಮತ್ತು ಕೈನಕಟ್ಟಿ ಉಪವಿದ್ಯುತ್ ವಿತರಣಾಕೇಂದ್ರಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ. ಸಾವಳಗಿ ಮತ್ತು ಬೀಳಗಿ, ಅಲಗೂರು ಮತ್ತು ನಾಗರಾಳಎಸ್‌ಪಿ ಉಪಕೇಂದ್ರಗಳ ನಿರ್ಮಾಣಕ್ಕೆ ಡಿಪಿಆರ್ ಅನುಮೋದಿಸಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಆಹ್ವಾನಿಸಲಾಗುವುದು. ಸುತಗುಂಡರ್, ಹೆಬ್ಬಾಳ, ಚಿಮ್ಮಡ, ಕೆಂದೂರು, ಸುರ್‌ಪಾಲಿ, ಸುನಗಾ ಮತ್ತು ಮುಗಳಖೋಡ ಉಪಕೇಂದ್ರಗಳ ನಿರ್ಮಾಣಕ್ಕೆ ಅಂದಾಜು ಪತ್ರಿಕೆಯನ್ನು ಅನುಮೋದನೆಗಾಗಿ ಸಲ್ಲಿಸಲಾಗಿದೆ. ಎರಡು ಉಪಕೇಂದ್ರಗಳ ನಿರ್ಮಾಣಕ್ಕೆ ನಿವೇಶನವನ್ನು ಗುರುತಿಸಲಾಗಿದೆ. ೬ ಉಪಕೇಂದ್ರಗಳ ನಿರ್ಮಾಣಕ್ಕೆ ನಿವೇಶನ ಗುರುತಿಸಬೇಕಿದೆ ಎಂದು ತಿಳಿಸಿದರು. ಲೋಕಾಪುರ ಉಪವಿದ್ಯುತ್ ವಿತರಣಾ ಕೇಂದ್ರ ಸೇರಿದಂತೆ ಅರ್ಹ ಎಲ್ಲಾ ಪ್ರಸ್ತಾವನೆಗಳನ್ನು ಮಂಜೂರು ಮಾಡುವಂತೆ ಅವರು ಸೂಚಿಸಿದರು.

ವಿಜಯಪುರ ಜಿಲ್ಲೆಯಲ್ಲಿ 6 ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, 3 ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸಲಾಗಿದೆ. ಎರಡು ಕಾಮಗಾರಿಗಳಿಗೆ ಡಿಪಿಆರ್ ಅನುಮೋದನೆ ನೀಡಲಾಗಿದೆ. ೮ ಕಾಮಗಾರಿಗಳಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. ೬ ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಲಾಗಿದೆ. ೧೧ ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಬೇಕಿದೆ. ಬೆಳಗಾವಿ ಜಿಲ್ಲೆಯಲ್ಲಿ 5 ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, 2 ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸಲಾಗಿದೆ. ಎರಡು ಕಾಮಗಾರಿಗಳಿಗೆ ಡಿಪಿಆರ್ ಅನುಮೋದನೆ ನೀಡಲಾಗಿದೆ. 5 ಕಾಮಗಾರಿಗಳಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. 12 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಲಾಗಿದೆ. 10 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಬೇಕಿದೆ. ಧಾರವಾಡ ಜಿಲ್ಲೆಯಲ್ಲಿ 2 ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಒಂದು ಕಾಮಗಾರಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. ೪ ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಲಾಗಿದೆ. 3 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಬೇಕಿದೆ. ಹಾವೇರಿ ಜಿಲ್ಲೆಯಲ್ಲಿ ಒಂದು ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಎರಡು ಕಾಮಗಾರಿಗಳಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. 7 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಲಾಗಿದೆ. 11 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಬೇಕಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 1 ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸಲಾಗಿದೆ. ಒಂದು ಕಾಮಗಾರಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. 6 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಬೇಕಿದೆ. ಗದಗ ಜಿಲ್ಲೆಯಲ್ಲಿ ಒಂದು ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸಲಾಗಿದೆ. ಒಂದು ಕಾಮಗಾರಿಗೆ ಡಿಪಿಆರ್ ಅನುಮೋದನೆ ನೀಡಲಾಗಿದೆ. ಒಂದು ಕಾಮಗಾರಿಗೆ ನಿವೇಶನವನ್ನು ಗುರುತಿಸಬೇಕಿದೆ. ಈ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಶ್ರೀ ಕುಮಾರ ನಾಯಕ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿದೇಶಕರಾದ ಡಾ.ಎನ್. ಮಂಜುಳ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English