ಪುತ್ತೂರು : ಸೇಲ್ಸ್‌ಮ್ಯಾನ್ ಆಗಿರುವ ವ್ಯಕ್ತಿಯೊಬ್ಬ ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಈ ಬಗ್ಗೆ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಯುವತಿಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ.
ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25ವ.)ಎಂಬವರು ಹನಿಟ್ರ್ಯಾಪ್‌ಗೆ ಗೊಳಗಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯೀದ್ ಮೋನು, ನಾಸಿರ್ ಮತ್ತು ಕಾರ್ಕಳದವಳೆಂದು ಪರಿಚಯಿಸಿಕೊಂಡಿದ್ದ ತನೀಶಾ ಎಂಬವರ ವಿರುದ್ಧ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಎ.12ಕ್ಕೆ ನಡೆದಿದ್ದು ಇದೀಗ ಪೊಲೀಸ್ ಮೇಲಾಧಿಕಾರಿಗಳ ಸೂಚನೆಯಂತೆ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ತನಿಖೆ ಕೈಗೆತ್ತಿಗೊಂಡ ಉಪವಿಭಾಗದ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್ ನೇತೃತ್ವದ ಪೊಲೀಸರು ಪ್ರಕರಣದ ಆರೋಪಿಗಳ ಪೈಕಿ ತನೀಶಾ ಎಂಬವರನ್ನು ಬಂಧಿಸಿದ್ದಾರೆ. ಉಳಿದ ಆರು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
Click this button or press Ctrl+G to toggle between Kannada and English