- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪಂಚೆಯುಟ್ಟು ಗದ್ದೆಗೆ ಇಳಿದು, ಉಳುಮೆ ಮಾಡಿದ ಪುತ್ತೂರು ಶಾಸಕ

Sanjeeva-Matandooru [1]ಪುತ್ತೂರು: ಕೆಲ ದಿನಗಳ ಹಿಂದೆ ಟ್ರಾಕ್ಟರ್ ಚಲಾಯಿಸಿ ಗದ್ದೆ ಉಳುಮೆಗೆ ಚಾಲನೆ ನೀಡಿ ಗಮನ ಸೆಳೆದಿದ್ದ ಶಾಸಕ ಸಂಜೀವ ಮಠಂದೂರು,   ರವಿವಾರ ಸ್ವತಃ ಗದ್ದೆಗೆ ಇಳಿದು ನೇಗಿಲು ಹಿಡಿದು ಉಳುಮೆ ಮಾಡಿದರು.

ಪುತ್ತೂರು ತಾಲೂಕಿನ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲಿರುವ ಗದ್ದೆಯಲ್ಲಿ ಪಂಚೆಯುಟ್ಟು ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದು `ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ’ ಅಭಿಯಾನ ಕ್ಕೆ ಚಾಲನೆ ನೀಡಿದರು.

ಆರ್ಯಾಪು ಗ್ರಾಮದ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಹಾಗೂ ಸಂಪ್ಯ ನವಚೇತನಾ ಯುವಕ ಮಂಡಲದ ಸಹಭಾಗಿತ್ವದಲ್ಲಿ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ದಿ. ಉಗ್ಗಪ್ಪ ಗೌಡ ಅವರ ಹಡೀಲು ಬಿದ್ದ ಗದ್ದೆಯಲ್ಲಿ `ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ’ ಅಭಿಯಾನ ನಡೆಯಿತು.