- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವಿವಿ ಕಾಲೇಜು: 806 ವಿದ್ಯಾರ್ಥಿಗಳಿಗೆ ಉಚಿತ ಕೊವಿಡ್‌ ಲಸಿಕೆ

UCM [1]ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್‌) ಘಟಕಗಳ ಸಹಯೋಗದೊಂದಿಗೆ ವಿವಿ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಮತ್ತು ಪ್ರಾಧ್ಯಾಪಕರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕೊವಿಡ್‌- 19 ಉಚಿತ ಲಸಿಕಾ ಶಿಬಿರದಲ್ಲಿ 806 ಕ್ಕೂ ಹೆಚ್ಚು ಮಂದಿ ಲಸಿಕೆ ಪಡೆದುಕೊಂಡರು.

ನಗರದಲ್ಲಿ ಖಾಸಗಿ ಬಸ್‌ಗಳ ಓಡಾಟ ಆರಂಭವಾಗಿರುವುದೂ ವಿದ್ಯಾರ್ಥಿಗಳಿಗೆ ಅನುಕೂಲವಾಗಿ ಪರಿಣಮಿಸಿತು. ವಿಶ್ವವಿದ್ಯಾನಿಲಯ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುಗಳ ಪದವಿ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಕೊವಿಡ್‌-19 ವಿರುದ್ಧದ ಲಸಿಕೆಯ ಮೊದಲ ಡೋಸ್‌ ಪಡೆದುಕೊಂಡರು. ಈ ಮೂಲಕ ಎರಡು ಶಿಬಿರಗಳಲ್ಲಿ ಒಟ್ಟು 1200 ಕ್ಕೂ ಹೆಚ್ಚು ಮಂದಿ ಲಸಿಕೆಯ ಪ್ರಯೋಜನ ಪಡೆದುಕೊಂಡಂತಾಗಿದೆ.

ಪ್ರಾಂಶುಪಾಲೆ ಡಾ. ಅನಸೂಯ ರೈ ಮಾರ್ಗದರ್ಶನದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‌ಕ್ರಾಸ್‌ ನೋಡಲ್‌ ಅಧಿಕಾರಿ ಡಾ. ಗಣಪತಿ ಗೌಡ, ಮಂಗಳೂರು ವಿಶ್ವವಿದ್ಯಾನಿಲಯ ಎನ್‌.ಎಸ್‌.ಎಸ್‌ ಕಾರ್ಯಕ್ರಮಾಧಿಕಾರಿ ಡಾ. ಕೆ ಎ ನಾಗರತ್ನ, ಕಾಲೇಜಿನ ಎನ್‌.ಎಸ್‌.ಎಸ್‌ ಅಧಿಕಾರಿಗಳಾದ ಡಾ. ಗಾಯತ್ರಿ ಮತ್ತು ಡಾ. ಸುರೇಶ್‌, ಕಾಲೇಜಿನ ಯುವ ರೆಡ್‌ ಕ್ರಾಸ್‌ ಕಾರ್ಯಕ್ರಮಾಧಿಕಾರಿ ಡಾ. ಕುಮಾರಸ್ವಾಮಿ ಎಂ ಸೇರಿದಂತೆ ಹಲವರು ಶಿಬಿರದ ವೇಳೆ ಸಹಕರಿಸಿದರು.