ಕುಶಾಲನಗರ ನೂತನ ತಾಲ್ಲೂಕು ಅಸ್ತಿತ್ವಕ್ಕೆ ಆರ್ ಅಶೋಕ ಚಾಲನೆ

1:04 AM, Wednesday, July 7th, 2021
Share
1 Star2 Stars3 Stars4 Stars5 Stars
(No Ratings Yet)
Loading...

Kushal Nagaraಕುಶಾಲನಗರ  : ಕಂದಾಯ ಸಚಿವರಾದ ಆರ್ ಅಶೋಕ ಅವರು ನೂತನವಾಗಿ ರಚನೆಗೊಂಡಿರುವ ಕೊಡಗು ಜಿಲ್ಲೆಯ ಐದನೇ ತಾಲ್ಲೂಕು ಕುಶಾಲನಗರದ ಅಧಿಕೃತ ಕಾರ್ಯಾರಂಭಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಆರ್. ಅಶೋಕ ಅವರು “ಕುಶಾಲನಗರ ತಾಲ್ಲೂಕು ಕೇಂದ್ರವಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು 20-30 ಬಾರಿ ಕಚೇರಿಗೆ ಬಂದು ವಿನಂತಿಸಿದ್ದಾರೆ. ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಕುಶಾಲನಗರ ತಾಲ್ಲೂಕು ಕೇಂದ್ರವಾಗಿದೆ. ಇಲ್ಲಿನ ಶಾಸಕರ ಹೋರಾಟದ ಫಲವಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ” ಎಂದು ಕಂದಾಯ ಸಚಿವರು ಹೇಳಿದರು.

“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಪೊನ್ನಂಪೇಟೆ ಮತ್ತು ಕುಶಾಲನಗರ ನೂತನ ತಾಲ್ಲೂಕು ಕೇಂದ್ರವಾಗಬೇಕು ಎಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಇಂದು ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ. ತಾಲ್ಲೂಕು ಕೇಂದ್ರದಲ್ಲಿ ಗ್ರೇಡ್-1 ತಹಶೀಲ್ದಾರರು ಸೇರಿದಂತೆ ಒಟ್ಟು ೧೨ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಜೊತೆಗೆ ೫೦ ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ” ಎಂದು ಸಚಿವರು ತಿಳಿಸಿದರು.

“ಸರ್ಕಾರ 2020-21 ನೇ ಸಾಲಿನಲ್ಲಿ ವಿಪತ್ತು ನಿರ್ವಹಣೆ, ಬೆಳೆ ಹಾನಿ ಪರಿಹಾರ, ಕೋವಿಡ್ ನಿರ್ವಹಣೆ ಹೀಗೆ ಹಲವು ವಿಪತ್ತನ್ನು ಎದುರಿಸಲು ಹೆಚ್ಚಿನ ಹಣ ಬಿಡುಗಡೆ ಮಾಡಿದೆ, ಕುಶಾಲನಗರ ತಾಲ್ಲೂಕು ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹಂತ ಹಂತವಾಗಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು” ಎಂದು ಭರವಸೆ ನೀಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English