ಬೆಲೆಯೇರಿಕೆಯ ವಿರುದ್ಧ ಬೀದಿಗಿಳಿದ ಬೀದಿಬದಿ ವ್ಯಾಪಾರಸ್ಥರು

6:24 PM, Thursday, July 8th, 2021
Share
1 Star2 Stars3 Stars4 Stars5 Stars
(No Ratings Yet)
Loading...

street-vendors ಮಂಗಳೂರು  : ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇಂದು ನಗರದ ಸ್ಟೇಟ್ ಬ್ಯಾಂಕ್ ಬಳಿ ಹಾಗೂ ಲೇಡಿಗೋಷನ್ ಬಳಿಯಲ್ಲಿ ಬೀದಿಬದಿ ವ್ಯಾಪಾರಸ್ಥರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ದ ಘೋಷಣೆಗಳನ್ನು ಕೂಗುವ ಮೂಲಕ ಬಿತ್ತಿಚಿತ್ರ ಹಿಡಿದು ಪ್ರತಿಭಟಿಸಿದರು.

ಬೆಲೆಯೇರಿಕೆಯ ವಿರುದ್ದ CPIM ಮಂಗಳೂರು ನಗರದಾದ್ಯಂತ ಹಮ್ಮಿಕೊಂಡ ವಾರಾಚರಣೆಯ ಭಾಗವಾಗಿ ಬೀದಿಬದಿ ವ್ಯಾಪಾರಸ್ಥರೂ ಕೂಡ ಭಾಗವಹಿಸಿ ಜನಚಳುವಳಿಗೆ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ CPIM ಯುವ ನಾಯಕರಾದ ಬಿ.ಕೆ.ಇಮ್ತಿಯಾಜ್ ಹಾಗೂ CPIM ನಗರ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ದೇಶ ಹಾಗೂ ರಾಜ್ಯವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಸರಕಾರಗಳು ನಿರಂತರವಾಗಿ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರ ಬದುಕನ್ನು ತೀರಾ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಸರಕಾರಗಳ ಕ್ರಮವನ್ನು ಟೀಕಿಸಿದರು.

ಪ್ರತಿಭಟನೆಯಲ್ಲಿ CPIM ನಾಯಕರಾದ ಮಹಮ್ಮದ್ ಮುಸ್ತಫಾ, ಹರೀಶ್ ಪೂಜಾರಿ, ಸಂತೋಷ್ ಆರ್.ಎಸ್, ಕಾರ್ಮಿಕ ನಾಯಕರಾದ ವಿಲ್ಲಿ ವಿಲ್ಸನ್, ನೌಷಾದ್,ಶ್ರೀಧರ್, ಮುಜಾಫರ್,ಹಸನ್, ಶಿವಪ್ಪ, ಗುಡ್ಡಪ್ಪ, ಮುಂತಾದವರು ಹಾಜರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English