ಬಿಜೆಪಿ ಪರ ಜನತೆಯ ವಿಶ್ವಾಸ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಸಂತಸ

6:35 PM, Thursday, July 8th, 2021
Share
1 Star2 Stars3 Stars4 Stars5 Stars
(No Ratings Yet)
Loading...

Nalin Kumar ಮಂಗಳೂರು : ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದನ್ನು ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಸಾಬೀತು ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಮೇಲೆ ವಿಶ್ವಾಸ ಇರಿಸಿದ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿತ್ತು. ಈ ಬಾರಿ ಮಸ್ಕಿ ಕ್ಷೇತ್ರದಲ್ಲಿ ಮಾತ್ರ ಪಕ್ಷಕ್ಕೆ ಹಿನ್ನಡೆಯಾಗಿದೆ. ಬೆಳಗಾವಿ ಮತ್ತು ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಮಹತ್ವದ ಗೆಲುವು ದಾಖಲಿಸಿದೆ. ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳಿಗೆ ಉಪ ಚುನಾವಣೆಯಲ್ಲಿ ಮತದಾರರು ಮನ್ನಣೆ ನೀಡಿದ್ದು ಬಿಜೆಪಿ ಗೆಲುವಿಗೆ ಪೂರಕವಾಗಿದೆ. ಈ ಫಲಿತಾಂಶದಿಂದ ರಾಜ್ಯದಲ್ಲಿ ಬಿಜೆಪಿಯ ಸಂಘಟನೆ ಇನ್ನಷ್ಟು ಬಲವರ್ಧನೆಯಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಾಂಗ್ರೆಸ್ ಪಕ್ಷವನ್ನು 5 ರಾಜ್ಯಗಳಲ್ಲೂ ಜನತೆ ತಿರಸ್ಕರಿಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ನಳಿನ್‌ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English