ಸುಳ್ಯ : ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆ ಮತ್ತು ರಾಷ್ಟೀಯ ಕುಟುಂಬ ನೆರವು ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಸಚಿವ ಎಸ್.ಅಂಗಾರ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿ ಕೋವಿಡ್ ಕಾಲದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಕೊರೋನಾ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ಮುಕ್ತ ತಾಲೂಕುವನ್ನಾಗಿ ಮಾಡಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಹರೀಶ್ ಕಂಜಿಪಿಲಿ, ವೆಂಕಟ್ ವಳಲಬೆ, ತಹಸೀಲ್ದಾರ್ ಅನಿತಾಲಕ್ಷ್ಮಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿಶಂಕರ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆಯಡಿ 26 ಫಲಾನುಭವಿಗಳಿಗೆ ಮತ್ತು ರಾಷ್ಟೀಯ ಕುಟುಂಬ ಯೋಜನೆಯಡಿ 35 ಫಲಾನುಭವಿಗಳಿಗೆ ಹಾಗೂ ಅಂತ್ಯ ಸಂಸ್ಕಾರ ಸಹಾಯಧನವನ್ನು 3 ಮಂದಿ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು.
Click this button or press Ctrl+G to toggle between Kannada and English