ಲಂಚ ಆರೋಪ ಸಾಬೀತು ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅಮಾನತು

2:51 PM, Friday, July 9th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

cheluvarajಚಿಕ್ಕಮಗಳೂರು:  ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

2005-06 ರಲ್ಲಿ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚೆಲುವರಾಜ್ ಕರ್ತವ್ಯ ಲೋಪ ಮಾಡಿದ್ದರು ಎಂಬ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ. ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾ ಮಾಡಲಾಗಿದೆ.

ಮಂಡ್ಯದಲ್ಲಿ ಕೆಲಸ ಮಾಡುತ್ತದ್ದಾಗ ಸರ್ಕಾರಕ್ಕೆ ಸೇರಬೇಕಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಣ ಬ್ಯಾಂಕಿಗೆ ಸಂದಾಯವಾದ ಬಳಿಕ ಚಲನ್ ತಿದ್ದಿದ್ದ ಆರೋಪದಡಿ ದೂರು ದಾಖಲಾಗಿತ್ತು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾಗೊಳಿಸಿ ಶಿಸ್ತು ಪ್ರಾಧಿಕಾರ ಹಾಗೂ ನೋಂದಣಿ ಪರಿವೀಕ್ಷಕ ಮೋಹನ್ ರಾಜ್ ಆದೇಶಿಸಿದ್ದಾರೆ.

ಕೆಲ ತಿಂಗಳ ಹಿಂದೆ ಸಚಿವ ಆರ್.ಅಶೋಕ್ ಅವರ ಆಪ್ತ ಸಹಾಯಕ ತನ್ನಲ್ಲಿ ಲಂಚ ಕೇಳಿದ್ದರು ಎಂದು ಚೆಲುವರಾಜ್ ಆರೋಪಿಸಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English