ಸರಕಾರಿ ಜಾಗದಲ್ಲಿ ಮೀನು ಮಾರುತ್ತಿದ್ದ ಗೂಡಂಗಡಿಗಳ ತೆರವು

10:19 PM, Saturday, July 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

Petty Shopಉಡುಪಿ : ಸರಕಾರಿ ಜಾಗದಲ್ಲಿ ಮೀನು ಮಾರುತ್ತಿದ್ದ ಗೂಡಂಗಡಿಗಳನ್ನು ಸಾರ್ವಜನಿಕರ ದೂರಿನ ಮೇರೆಗೆ ಉಡುಪಿ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆ ಮೂಲಕ ತೆರವುಗೊಳಿಸಿದ್ದಾರೆ.

ನಗರಸಭೆಯ ಅಧಿಕಾರಿಗಳು ನಗರದ ಪೋಲಿಸರ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ಸುತ್ತಮುತ್ತಲಿನ ಒಟ್ಟು ಐದು ಅಂಗಡಿಗಳನ್ನು ತೆರವು ಮಾಡಿದ್ದಾರೆ.

ಯಾವುದೇ ನೋಟೀಸ್ ನೀಡದೆ ಏಕಾಏಕಿ ತೆರವುಗೊಳಿಸಿರುವುದಕ್ಕೆಅಂಗಡಿ ಮಾಲಕರಾದ ಅಶೋಕ್ ರಾಜ್ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ಗೂಡಂಗಡಿ ಸಾಗಿಸುವ ವಾಹನದಡಿ ಮಲಗಿ ಪ್ರತಿಭಟಿಸಿದರು.

 

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‌ರಾಜ್, ಕಂದಾಯ ಅಧಿಕಾರಿ ಧನಂಜಯ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮೊದಲಾದವರು ಹಾಜರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English