ಕಲಬುರಗಿ ಲೋಕೋಪಯೋಗಿ ಭವನ ಲೋಕಾರ್ಪಣೆ

12:46 AM, Sunday, July 11th, 2021
Share
1 Star2 Stars3 Stars4 Stars5 Stars
(No Ratings Yet)
Loading...

Kalburgi PWDಕಲಬುರಗಿ :  ಲೊಕೋಪಯೋಗಿ ಇಲಾಖೆಯ ವಿವಿಧ ಹಂತದ ಕಚೇರಿಗಳು ಒಂದೇ ಸೂರಿನಡಿ ಇರಬೇಕೆಂಬ ಪರಿಕಲ್ಪನೆಯಿಂದ 47.10 ಕೋಟಿ ರೂ. ವೆಚ್ಚದಲ್ಲಿ ಆಕರ್ಷಕ ವಾಸ್ತುಶಿಲ್ಪಿಯೊಂದಿಗೆ ಕಲಬುರಗಿ ನಗರದಲ್ಲಿ ನಿರ್ಮಾಣಗೊಂಡಿರುವ “ಲೋಕೋಪಯೋಗಿ ಭವನ” ಸೇರಿದಂತೆ ಕಲಬುರಗಿ ಜಿಲ್ಲೆಯ 181.85 ಕೋಟಿ ರೂ. ಬೃಹತ್ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಚಾಲನೆ ನೀಡಿದರು.

ನೂತನ ಲೋಕೋಪಯೋಗಿ ಭವನದಲ್ಲಿ ಅಯೋಜಿಸಲಾದ ಭವ್ಯ ಕಾರ್ಯಕ್ರಮದಲ್ಲಿ ಲೊಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಅರೋಗ್ಯ ಇಲಾಖೆಯ ಒಟ್ಟು 16 ಕಾಮಗಾರಿಗಳಿಗೆ ಅಡಿಗಲ್ಲು, ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಯನ್ನು ಮುಖ್ಯಮಂತ್ರಿಗಳು ನೆರವೇರಿಸಿದರು.

ಕಲಬುರಗಿ-ಶರಣ ಸಿರಸಗಿ, ಕಲಬುರಗಿ-ರಾಮ ಮಂದಿರ ನಡುವೆ ರೈಲ್ವೆ ರಸ್ತೆ ಮೇಲ್ಸೇತುವೆ ಲೋಕಾರ್ಪಣೆ, ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನೂತನ ಕಟ್ಟಡ, ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳ ಉದ್ಘಾಟನೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನೂತನ ಕಟ್ಟಡಗಳ ಉದ್ಘಾಟನೆ ಇಂದು ನೆರವೇರಿಸಲಾಗಿದೆ ಎಂದ ಅವರು ಕಳೆದ 2 ವರ್ಷದಲ್ಲಿ ನೆರೆ ಪ್ರವಾಹ, ಕೋವಿಡ್ ಮಹಾಮಾರಿ ನಡುವೆಯೂ ಅಭಿವೃದ್ಧಿ ಕಾರ್ಯ ನಿರಂತರ ಸಾಗುತ್ತಿದ್ದು, ಈ ಅಭಿವೃದ್ಧಿ ಕಾರ್ಯಗಳು ಸಾಕ್ಷಿಯಾಗಿವೆ. ಸಮಗ್ರ ಕರ್ನಾಟಕದ ನಿರ್ಮಾಣ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿಗಳು ನುಡಿದರು.

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯದ ಅಂಕ ಮತ್ತು ಸ್ಥಾನದಲ್ಲಿ ಗಣನೀಯ ಸುಧಾರಣೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಪ್ರಯತ್ನ ನಿರಂತರ ಸಾಗಿದೆ. ನಿರ್ಮಾಣ ಕಾರ್ಮಿಕರು ವಸತಿ ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಮನಗಂಡಿರುವ ಸರ್ಕಾರ ಕಲಬುರಗಿ ಸೇರಿದಂತೆ 10 ಜಿಲ್ಲೆಗಳಲ್ಲಿ ಸುಸಜ್ಜಿತ ತಾತ್ಕಾಲಿಕ ವಸತಿ ಗೃಹ ಸೌಲಭ್ಯವನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 100 ಮನೆಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿಯವರಿಗೆ 3,200.87 ಕೋಟಿ ರೂ.ಗಳು ಹಾಗೂ ಪರಿಶಿಷ್ಟ ಪಂಗಡದವರಿಗೆ 1,270.50 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ ನಿರ್ವಹಣೆ, ವಸತಿ ಶಾಲೆ ನಿರ್ವಹಣೆ ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುμÁ್ಠನ ಮಾಡಿದ್ದು, 11.73 ಲಕ್ಷ ಪರಿಶಿಷ್ಟ ಜಾತಿ ಹಾಗೂ 4.62 ಲಕ್ಷ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸೌಲಭ್ಯ ಪಡೆದಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದಿಗೆ ಸಂಕಲ್ಪ: ಕಲ್ಯಾಣ ಕರ್ನಾಟಕ ಭಾಗದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ರೂಪಿಸಿದೆ. 2021-22ನೇ ಸಾಲಿಗೆ ಕೆ.ಕೆ.ಅರ್.ಡಿ.ಬಿ. ಮಂಡಳಿಗೆ 1500 ಕೋಟಿ ರೂ. ಅನುದಾನ ಹಂಚಿಕೆ ಮಾಡಿ ಕ್ರಿಯಾ ಯೋಜನೆಗೂ ಅನುಮೋದನೆ ನೀಡಿದೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಗಳು, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ನೀರಾವರಿ, ಕುಡಿಯುವ ನೀರು, ರಸ್ತೆ ಮತ್ತು ಸಂಪರ್ಕ, ಅಂತರ್ಜಲ ಸಂರಕ್ಷಣೆ, ಕೃಷಿ ವಲಯದಲ್ಲಿ ಈ ಅನುದಾನ ವಿನಿಯೋಗಿಸಲಾಗುತ್ತಿದೆ. ಕೋವಿಡ್ ಸಂಕಷ್ಟದ ನಡುವೆಯೂ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಯಾವುದೇ ಅನುದಾನ ಕಡಿತ ಮಾಡಿಲ್ಲ. ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಮಾನವ ಸಂಪನೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘವನ್ನು ರಚಿಸಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ದೃಢ ಸಂಕಲ್ಪವಾಗಿದೆ ಎಂದು ಸಿ.ಎಂ. ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪ್ರಾದೇಶಿಕ ಅಸಮತೋಲನ ನಿವಾರಣೆಗೆ 3000 ಕೋಟಿ ರೂ.: ಪ್ರಾದೇಶಿಕ ಅಸಮತೋಲನ ನಿವಾರಣೆಗೆ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಮುಂದುವರೆಸಲು 2021-22ನೇ ಸಾಲಿನಲ್ಲಿ 3,000 ಕೋಟಿ ರೂ. ಗಳನ್ನು ಆಯವ್ಯಯದಲ್ಲಿ ಮೀಸಲಿರಿಸಿದೆ ಎಂದು ತಿಳಿಸಿದ ಸಿ.ಎಂ. ಬಿ.ಎಸ್.ಯಡಿಯೂರಪ್ಪ ಇತ್ತೀಚೆಗμÉ್ಟ ನಡೆದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ 10 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅಂತೆಯೇ ಕೂಡಲ ಸಂಗಮ ಅಭಿವೃದ್ಧಿ ಮಂಡಳಿಯ ಸಭೆ ನಡೆಸಿ 94 ಕೋಟಿ ರೂ. ಗಳ ವೆಚ್ಚದಲ್ಲಿ ಕೈಗೊಂಡಿರುವ ಬಸವ ಅಂತರರಾಷ್ಟ್ರೀಯ ಮಟ್ಟದ ವಸ್ತು ಸಂಗ್ರಹಾಲಯ ನಿರ್ಮಾಣವನ್ನು ಚುರುಕುಗೊಳಿಸಲು ಸೂಚಿಸಲಾಗಿದೆ ಎಂದರು.

ಕೋವಿಡ್ ಮೂರನೇ ಅಲೆಗೆ ಸನ್ನಧ: ರಾಜ್ಯ ಸರ್ಕಾರವು ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದು, ಕೋವಿಡ್ 3ನೇ ಅಲೆ ಇನ್ನಷ್ಟು ಕಠಿಣವಾದ ಸಂದರ್ಭವನ್ನು ಸೃಷ್ಟಿಸಲಿದೆ ಎನ್ನುವುದು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ತಡೆಗಟ್ಟಲು ಸರ್ಕಾರ ಸನ್ನದ್ಧವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ ನಮ್ಮಿಂದ ಇನ್ನೂ ದೂರವಾಗಿಲ್ಲ ಎಂಬುದನ್ನು ಎಲ್ಲರು ಮನಗಂಡು ಮಾಸ್ಕ್ ಧರಿಸುವುದು, ಸ್ವಚ್ಚತೆ, ಸಾಮಾಜಿಕ ಅಂತರ ಹಾಗೂ ನಿರಂತರ ಸ್ಯಾನಿಟೈಸ್ ಬಳಕೆಯ ನಡವಳಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಒತ್ತಿ ಹೇಳಿದರು.

ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಅವರು ಮಾತನಾಡಿ ಸ್ವಾತಂತ್ರ್ಯ ಬಂದು 70 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲದಲ್ಲಿ ಸರ್ಕಾರಕ್ಕೆ ನೆರೆ ಹಾವಳಿ, ಕೊರೋನಾದಂತಹ ಬಂದ ಸಂಕಷ್ಠ ಯಾವುದೇ ಸರ್ಕಾರದಲ್ಲಿ ಇರಲಿಲ್ಲ. 2019ರಲ್ಲಿ ನೆರೆ ಹಾವಳಿಯಿಂದ 35 ಸಾವಿರ ಕೋಟಿ ರೂ. ಮತ್ತು 2020ನೇ ಸಾಲಿನ ಮಳೆ ಹಾನಿಯಿಂದ 25 ಸಾವಿರ ಕೋಟಿ ರೂ. ಹೀಗೆ ಕಳೆದ 2 ವರ್ಷದಲ್ಲಿ 60 ಸಾವಿರ ಕೋಟಿ ರೂ. ನಷ್ಟ. ಇದಲ್ಲದೆ ಕೋವಿಡ್ ಪ್ರಥಮ ಅಲೆಯ ಲಾಕ್ ಡೌನ್ ಕಾರಣ ಶ್ರಮಿಕ ವರ್ಗದವರಿಗೆ 2280 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಣೆ, ಎರಡನೇ ಅಲೆಯಲ್ಲೂ ಸಂಕಷ್ದದಲ್ಲದ್ದವರಿಗೆ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇಷ್ಟೆಲ್ಲದರ ನಡುವೆ ಅಭಿವೃದ್ಧಿ ಕಾರ್ಯ ಮಾತ್ರ ನಿಂತಿಲ್ಲ. ಇದಕ್ಕೆ ಇಂದು 1.62 ಲಕ್ಷ ಚದುರ ಅಡಿ ವಿಸ್ತೀರ್ಣದಲ್ಲಿ ಭವ್ಯ ಲೋಕೋಪಯೋಗಿ ಭವನ ಕಟ್ಟಡ ಒಳಗೊಂಡಂತೆ ನೂರಾರು ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ ನೀಡಿರುವುದೇ ಸಾಕ್ಷಿ ಎಂದ ಅವರು ಕಳೆದ 3 ವರ್ಷದಲ್ಲಿ ಕಲಬುರಗಿ ಜಿಲ್ಲೆಯ ಲೊಕೋಪಯೋಗಿ ಇಲಾಖೆಗೆ 5083 ಕೋಟಿ ರೂ. ಅನುದಾನ ನೀಡಿದೆ ಎಂದರು.
ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರು ಮಾತನಾಡಿ ತಳ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ. ಇಂದು ಸುಮಾರು 30 ಕೋಟಿ ರೂ. ವೆಚ್ಚದ ನೂತನ ವಸತಿ ಶಾಲೆಗಳನ್ನು ಉದ್ಘಾಟಿಸಲಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಎಸ್.ಸಿ.-ಎಸ್.ಟಿ. ವಸತಿ ಶಾಲೆಗಳನ್ನು ತರೆಯಬೇಕು ಎಂದು ಹಂಬಲದಿಂದ ಮುಖ್ಯಮಂತ್ರಿಯವರು ಪ್ರಸÀಕ್ತ ಸಾಲಿನಲ್ಲಿ 500 ಕೋಟಿ ರೂ. ವೆಚ್ಚದಲ್ಲಿ 25 ಕ್ರೈಸ್ ವಸತಿ ಶಾಲೆಗಳ ಸ್ಥಾಪನೆಗೆ ಮಂಜೂರಾತಿ ನೀಡಿದ್ದಾರೆ.

ಮಕ್ಕಳ ಮನೆ ಬಾಗಿಲಿಗೆ ಶಿಕ್ಷಣ ಒಯ್ಯಬೇಕು ಎಂಬ ನಿಟ್ಟಿನಲ್ಲಿ ರಾಜ್ಯದಾದ್ಯಂತ 826 ಕ್ರೈಸ್ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, 1.50 ಲಕ್ಷ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಎಸ್.ಸಿ.-ಎಸ್.ಟಿ. ಮಕ್ಕಳಿಗೆ ಶಿಕ್ಷಣ ನೀಡುವುದಷ್ಟೆ ಅಲ್ಲ ಕ್ರೀಡೆಗೂ ಪ್ರೋತ್ಸಾಹ ನೀಡಬೇಕೆಂಬ ಕಾರಣದಿಂದ ಈ ವರ್ಷ ವಿಭಾಕ್ಕೊಂದು “ಸ್ಪೋರ್ರ್ಟ್ ಎಕ್ಸಿಲೆನ್ಸಿ ಸೆಂಟರ್” ಸ್ಥಾಪನೆಗೆ ಆಯವ್ಯಯದಲ್ಲಿ 5 ಕೋಟಿ ರೂ. ಮೀಸಲಿರಿಸಿದೆ. ರಾಷ್ಟಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಆಶಯಕ್ಕನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗದ ಸಮುದಾಯದ ಶ್ರೇಯೋಭಿವೃದ್ಧಿಗೆ ಪ್ರಸಕ್ತ 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅಭಿವೃದ್ಧಿಗಾಗಿ 18,331.54 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ 7,673.47 ಕೋಟಿ ರೂ.ಗಳು ಸೇರಿದಂತೆ ಒಟ್ಟಾರೆ 26,000 ಕೋಟಿ ರೂ.ಗಳ ಅನುದಾನವನ್ನು ಒದಗಿಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದೆ ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷರಾದ ಡಾ. ಬಸವರಾಜ ಪಾಟೀಲ್ ಸೇಡಂ ಅವರು ಮಾತನಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟೂರು ಮಂಡ್ಯ, ಕರ್ಮಭೂಮಿ ಶಿವಮೊಗ್ಗವಿದ್ದರು ಅವರು ಹೆಚ್ಚಿನ ಆದ್ಯತೆ ನೀಡುವುದು ನಮ್ಮ ಕಲ್ಯಾಣ ಕರ್ನಾಟಕ ಭಾಗಕ್ಕೆ. ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಣಕ್ಕೆ 500 ಕೋಟಿ ರೂ. ಘೋಷಿಸಿ ಈಗಾಗಲೆ 200 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಸಂಘದಿಂದ 10 ಸಾವಿರ ಜನರಿಗೆ ಐ.ಎ.ಎಸ್., 500 ಜನರಿಗೆ ಬ್ಯಾಂಕಿಂಗ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ತಲಾ 2000 ರೂ. ತರಬೇತಿ ಭತ್ಯೆಯೊಂದಿಗೆ ನೀಡಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಹೀರಪೂರ-ಶರಣಸಿರಸಗಿ ಮಧ್ಯ ರೈಲ್ವೆ ರಸ್ತೆ ಮೇಲ್ಸುತುವೆಗೆ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಕಲಬುರಗಿ-ರಾಮ ಮಂದಿರ ನಡುವಿನ ರೈಲ್ವೆ ರಸ್ತೆ ಮೇಲ್ಸುತುವೆಗೆ ಸ್ವಾಮಿ ವಿವೇಕಾನಂದರ ಹೆರಿಡಬೇಕೆಂದು ವೇದಿಕೆಯಲ್ಲಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರಲ್ಲಿ ಮನವಿ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಲೋಕಸಭಾ ಸದಸ್ಯ ಡಾ. ಉಮೇಶ ಜಿ. ಜಾಧವ, ವಿಧಾನಸಭೆ ಶಾಸಕರುಗಳಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮೂಡ, ಕನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ, ಶರಣು ಸಲಗರ್, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಡಾ.ತಳವಾರ ಸಾಯಿಬಣ್ಣಾ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಕಲಬುರಗಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ವಲಯದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಳಗೆ, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕಲಬುರಗಿ ಎ.ಪಿ.ಎಂ.ಸಿ ಅಧ್ಯಕ್ಷ ಗುರುಬಸಪ್ಪ ಕಣಕಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕೆ.ಕೆ.ಆರ್.ಡಿ.ಬಿ. ಮಂಡಳಿಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಐ.ಜಿ.ಪಿ. ಮನೀμï ಖರ್ಬಿಕರ್, ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಕೆ.ಎಸ್.ಕೃಷ್ಣಾ ರೆಡ್ಡಿ, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಜೆಸ್ಕಾಂ ಎಂ.ಡಿ. ರಾಹುಲ್ ಪಾಂಡ್ವೆ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ. ದಿಲೀಷ ಶಶಿ, ಕಲಬುರಗಿ ಜಿಲ್ಲಾ ಪೆÇಲೀಸ್ ಅಧೀಕ್ಷಕಿ ಡಾ. ಸಿಮಿ ಮರಿಯಮ್ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಲೊಕೋಪಯೋಗಿ ಇಲಾಖೆಯ ಈಶಾನ್ಯ ವಲಯದ ಮುಖ್ಯ ಅಭಿಯಂತ ಜಗನ್ನಾಥ ಹಲಿಂಗೆ, ಕಾರ್ಯನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಹೆಚ್. ಜೇರಟಗಿ, ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಖಜಿ ಸೇರಿದಂತೆ ಮತ್ತಿತರ ಜನಪ್ರತಿನಿಧಿಗಳು, ಅಧಿಕಾರಿಗಳು, ಗುತ್ತಿಗೆದಾರರು ಇದ್ದರು. ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಸ್ವಾಗತಿಸಿದರು.

ಲೊಕೋಪಯೋಗಿ ಭವನದಲ್ಲಿ ಶಂಕುಸ್ಥಾಪನೆ/ ಉದ್ಘಾಟನೆಯಾದ ಕಾಮಗಾರಿಗಳ ವಿವರ:

 ಲೊಕೋಪಯೋಗಿ ಇಲಾಖೆಯಿಂದ ಕಲಬುರಗಿ-ಅಫಜಲಪೂರ ರಸ್ತೆಯಲ್ಲಿ ಬರುವ 35.05 ಕೋಟಿ ರೂ. ವೆಚ್ಚದ ಮತ್ತು ಕಲಬುರಗಿ ನಗರದ ಜೇವರ್ಗಿ ರಸ್ತೆಯಲ್ಲಿ ಬರುವ 23.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ರೈಲ್ವೆ ರಸ್ತೆ ಮೇಲ್ಸೇತುವೆÉಗಳು ಲೋಕಾರ್ಪಣೆ.

 ಲೊಕೋಪಯೋಗಿ ಇಲಾಖೆಯ ವಿವಿಧ ಹಂತದ ಕಚೇರಿಗಳು ಒಂದೇ ಸೂರಿನಡಿ ಇರಬೇಕೆಂಬ ಪರಿಕಲ್ಪನೆಯಿಂದ 47.10 ಕೋಟಿ ರೂ. ವೆಚ್ಚದಲ್ಲಿ ಆಕರ್ಷಕ ವಾಸ್ತುಶಿಲ್ಪಿಯೊಂದಿಗೆ ನಿರ್ಮಾಣಗೊಂಡಿರುವ “ಲೊಕೋಪಯೋಗಿ ಭವನ” ಲೋಕಾರ್ಪಣೆ.

 ಸೇಡಂ ಉಪವಿಭಾಗದ ಸೇಡಂ, ಕಾಳಗಿ, ಚಿಂಚೋಳಿ ಹಾಗೂ ಚಿತ್ತಾಪೂರ ತಾಲೂಕಿನಲ್ಲಿ ಸಿ.ಸಿ.ರಸ್ತೆ, ರಸ್ತೆ ಸುಧಾರಣೆ, ವಸತಿ ನಿಲಯ ನೂತನ ಕಟ್ಟಡ ಹೀಗೆ 25.61 ಕೋಟಿ ರೂ. ವೆಚ್ಚದ 7 ಕಾಮಗಾರಿಗಳ ಅಡಿಗಲ್ಲು/ ಉದ್ಘಾಟನೆ.

 ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾದ 15.49 ಕೋಟಿ ರೂ. ವೆಚ್ಚದ ಅವರಾದ (ಬಿ) ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, 4.22 ಕೋಟಿ ರೂ. ವೆಚ್ಚದ ಕಲಬುರಗಿ ಟೌನ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, 7.20 ಕೋಟಿ ರೂ. ವೆಚ್ಚದ ಆಳಂದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಹಾಗೂ 1.98 ಕೋಟಿ ರೂ. ವೆಚ್ಚದ ಆಳಂದ ಮೆಟ್ರಿಕ್ ಪೂರ್ವ ಬಾಲಕೀಯರ ವಸತಿ ನಿಲಯಗಳ ಉದ್ಘಾಟನೆ.

 ಕಲಬುರಗಿ ನಗರದ ಆಳಂದ ರಿಂಗ್ ರಸ್ತೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ.

 ಶಹಾಬಾದ ಪಟ್ಟಣದಲ್ಲಿ ಕಳೆದ 20 ವರ್ಷದಿಂದ ಪಾಳು ಬಿದ್ದಿದ್ದ ಇ.ಎಸ್.ಐ.ಸಿ. ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮುರುಗೇಶ ನಿರಾಣಿ ಅವರ ವಿಶೇಷ ಕಾಳಜಿಯಿಂದ 12 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣವಾಗಿ ನವೀಕರಣಗೊಳಿಸುತ್ತಿದ್ದು, ಇದಕ್ಕೆ ಪೂರ್ವಕವಾಗಿ ಇಂದು ಆಸ್ಪತ್ರೆಯ ನವೀಕರಣ ಕಾರ್ಯಕ್ಕೆ 4.98 ಕೋಟಿ ರೂ. ಮತ್ತು ಮೆಡಿಕಲ್ ಗ್ಯಾಸ್ ಪೈಪ್‍ಲೈನ್ ಅಳವಡಿಕೆಗೆ 1.70 ಕೋಟಿ ರೂ. ಮೊತ್ತದ ಕಾಮಗಾರಿಗೆ ಅಡಿಗಲ್ಲು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English