- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪತ್ರಿಕಾಭವನದ ಮುಂಭಾಗದಲ್ಲಿ ಉದ್ಯಾನವನ: ವೇದವ್ಯಾಸ ಕಾಮತ್

 

Press Club VanaMahotsava1 [1]ಮಂಗಳೂರು: ಮಂಗಳೂರು ಪತ್ರಿಕಾ ಭವನದ ಮುಂಭಾಗದಲ್ಲಿ ಮಂಗಳೂರು ಮಹಾ ನಗರಪಾಲಿಕೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಉದ್ಯಾನವನ ನಿರ್ಮಾಣ ಮಾಡುವುದಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ,ಅರಣ್ಯ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಪತ್ರಿಕಾ ಭವನದ ಬಳಿ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ .ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿವರ್ಷ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದ್ದು, ಇದು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಅವರು ಹೇಳಿದರು .
Press Club VanaMahotsava1 [2]
ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ಮಾತನಾಡಿ ಮಂಗಳೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಳೆದ 5 ವರ್ಷದಲ್ಲಿ 50 ಸಾವಿರ ಗಿಡಗಳನ್ನು ನೆಡಲಾಗಿದೆ .ಪ್ರಸುತ್ತ ವರ್ಷದಲ್ಲಿ 2 ಸಾವಿರ ಗಿಡಗಳನ್ನು ನೆಡಲಾಗಿದೆ .ಆದರೆ ಈ ಬಾರಿ ಕೊರೊನ ಕಾರಣದಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಗಿಡ ನೆಡಲು ಸಾಧ್ಯವಾಗಿಲ್ಲ ಎಂದು ಹೇಳಿದರು .

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನಾಥ್ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು , ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಆರಿಫ್ ಪಡುಬಿದ್ರಿ ಉಪಸ್ಥಿತರಿದ್ದರು .ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟಾ ಕಾರ್ಯಕ್ರಮ ನಿರೂಪಿಸಿದರು .