ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

10:24 PM, Tuesday, July 13th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Bantwal Farming ಬಂಟ್ವಾಳ: ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು.

ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭತ್ತದ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು.

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ಚೆನ್ನಕೇಶವಮೂರ್ತಿ, ತಾಂತ್ರಿಕ ಕೃಷಿ ಅಧಿಕಾರಿ ನಂದನ್ ಶೆಣೈ, ಪಾಣೆಮಂಗಳೂರು ಸಹಾಯಕ ಅಧಿಕಾರಿ ಕೊರಗಪ್ಪ, ಆತ್ಮ ಎಟಿಎಂ ಹನುಮಂತ ಕಲ್ಗಿ, ಕೃಷಿಕ ಸಮಾಜದ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಮವಂತೂರು, ರಾಜ್ಯ ಪ್ರತಿನಿಧಿ ಪದ್ಮನಾಭ ರೈ, ಸದಸ್ಯರಾದ ಗಣೇಶ್ ಶೆಟ್ಟಿ, ಎಸ್.ಹೊಳ್ಳ, ಪೊಳಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ್ ನಾವಡ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Bantwal Farming

KSRTC ICU  ಅಂಬುಲೆನ್ಸ್ ಬಸ್ಸ್‌

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರದೇಶಾಭಿವೃದ್ಧಿ ನಿಧಿಯಿಂದ ಪ್ರಪ್ರಥಮ KSRTC ICU  ಅಂಬುಲೆನ್ಸ್ ಬಸ್ಸ್‌ಗೆ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಅವರು ಚಾಲನೆ ನೀಡಿದರು ಐದು ಆಕ್ಸಿಜನ್ ಬೆಡ್,ರೋಗಿಗಳ ನಿಗಾ ಇಡುವ ವ್ಯವಸ್ಥೆ,ಕ್ಲಿನಿಕ್ ಇರಲಿದ್ದು ಒಬ್ಬರು ಡಾಕ್ಟರ್,ಸಹಾಯಕ ನರ್ಸ್ ಇರಲಿದ್ದು ಬಂಟ್ವಾಳ ತಾಲೂಕಿನ ಗ್ರಾಮ,ಗ್ರಾಮಗಳಿಗೆ ಭೇಟಿ ನೀಡಿ ಕ್ಷೇತ್ರದ ಜನರ ಆರೋಗ್ಯ ತಪಾಸಣೆ ನಡೆಸಲಿದೆ.

Bus Ambulance

Bus Ambulance

Bus Ambulance

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English