ಬಳ್ಳಾರಿ: ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ.
ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ.
ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ ವೈದ್ಯಾಧಿಕಾರಿ ಡಾ. ವಿದ್ಯಾಶ್ರೀ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಜಲಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗರ್ಭಾವಸ್ಥೆ ಪೂರ್ಣವಾಗದೆ ಅಕಾಲಿಕವಾಗಿ ಮಗು ಜನಿದ್ದು, ಮಗುವಿನ ತೂಕ ಕಡಿಮೆ ಇದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಮಗುವನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಪೋಷಣೆ ಮಾಡಲಾಗುತ್ತಿದೆ.
Click this button or press Ctrl+G to toggle between Kannada and English