ಮಂಗಳೂರು ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಹಾಗೂ ಕಚೇರಿಗೆ ಎಸಿಬಿ ದಾಳಿ‌

4:55 PM, Thursday, July 15th, 2021
Share
1 Star2 Stars3 Stars4 Stars5 Stars
(No Ratings Yet)
Loading...

ACB-Raidಮಂಗಳೂರು : ರಾಜ್ಯದ ಒಂಬತ್ತು ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದು,  ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಜಿ. ಶ್ರೀಧರ್ ಅವರ ಮನೆ ಹಾಗೂ ಕಚೇರಿಗೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಜಿ. ಶ್ರೀಧರ್ ಅವರಿಗೆ ಸೇರಿದ ಮನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಘಟಕಕ್ಕೆ ದಾಳಿ‌ ನಡೆಸಿದ ಅಧಿಕಾರಿ ಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಎಸಿಬಿ ಅಧಿಕಾರಿಗಳು ಜಿ. ಶ್ರೀಧರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಕೋಲಾರ, ಮಂಗಳೂರು ಬೀದರ್ ಸೇರಿದಂತೆ ಸುಮಾರು 40 ಸ್ಥಳಗಳಿಗೆ 300ಕ್ಕೂ ಅಧಿಕ ಎಸಿಬಿ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಜಿ. ಶ್ರೀಧರ್, ಕಾರ್ಯಪಾಲಕ ಅಭಿಯಂತರ,‌ ನಗರಾಭಿವೃದ್ಧಿ ವಿಭಾಗ ಜಿಲ್ಲಾಧಿಕಾರಿ ಕಚೇರಿ ಮಂಗಳೂರು, 2. ಕೃಷ್ಣ ಎಸ್., ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಉಡುಪಿ,  ಆರ್.ಪಿ ಕುಲಕರ್ಣಿ, ಸಿಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ, ಎಚ್.ಆರ್ ಕೃಷ್ಣಪ್ಪ, ಸಹಾಯಕ ನಿರ್ದೇಶಕ, ಮಾಲೂರು ನಗರ ಯೋಜನಾ ಪ್ರಾಧಿಕಾರ ಕೋಲಾರ,  ಸುರೇಶ್ ಮೋಹ್ರೆ, ಜೆಇ ಪಿಆರ್ಇ ಬೀದರ್,ವೆಂಕಟೇಶ್ ಟಿ, ಡಿಸಿಎಫ್ ಸಾಮಾಜಿಕ ಅರಣ್ಯ ಮಂಡ್ಯ,  ಸಿದ್ದರಾಮ ಮಲ್ಲಿಕಾರ್ಜುನ್, ಎಇಇ, ಹೆಸ್ಕಾಂ ವಿಜಯಪುರ, ಎ.ಕೃಷ್ಣಮೂರ್ತಿ, ಹಿರಿಯ ಮೋಟಾರು ವಾಹನ ನಿರೀಕ್ಷಕರು ಕೋರಮಂಗಲ, ಎ.ಎನ್.ವಿಜಯ್ ಕುಮಾರ್, ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಬಳ್ಳಾರಿ ಮೊದಲಾದವರ ಮನೆ, ಕಚೇರಿಗೆ ದಾಳಿ ನಡೆದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English