ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಂಪ್‌ವೆಲ್ ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ.
ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ಆಗಮಿಸುಸುತ್ತಿದ್ದ ಕಾರು ಎದುರಿನಿಂದ ವೇಗವಾಗಿ ಬಂದ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿಕೊಂಡಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಚಲಾಯಿಸುತ್ತಿದ್ದ ಕಾರನ್ನು ಸ್ಥಳೀಯರು ಸಹಕಾರದೊಂದಿಗೆ ಪೊಲೀಸರು ರಸ್ತೆಗೆ ತಳ್ಳಿ ನಿಲ್ಲಿಸಿದರು. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Click this button or press Ctrl+G to toggle between Kannada and English