ಬೆಂಗಳೂರು : ನಟ ದರ್ಶನ್ ಮತ್ತು ಸ್ನೇಹಿತರ ಗಲಾಟೆ ವಿಚಾರವಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ ಹಲವು ಗಂಭೀರ ಆರೋಪಗಳನ್ನ ಮಾಡಿದ್ದಾರೆ.
ಸಂದೇಶ್ ದಿ ಪ್ರಿನ್ಸ್ ಹೋಟೆಲಿನಲ್ಲಿ ದರ್ಶನ್ನೇ ಸಪ್ಲೈಯರ್‌ಗೆ ಹೊಡೆದಿರೋದು ಎಂದು ನೇರವಾಗಿ ಆರೋಪಿಸಿದ್ದು, ಭಾರೀ ಸಂಚಲನ ಮೂಡಿಸಿದೆ. ನಾನು ಹೇಳಿದ ಎಲ್ಲ ಮಾತುಗಳು ನಿಜ ಎಂಬುದನ್ನು ಇಂದ್ರಜಿತ್ ಸ್ಪಷ್ಟ ಪಡಿಸಿದ್ದಾರೆ.
ಪ್ರಕರಣದ ಸರಿಯಾದ ತನಿಖೆಯಾಗಬೇಕು ಎಂದರೆ ಸಿಸಿಟಿವಿ ದೃಶ್ಯಗಳನ್ನು ಹೊರತೆಗೆಯಬೇಕು ಎಂದು ಅವರು ಹೇಳಿದ್ದಾರೆ.
ಸಣ್ಣದಾಗಿ ಗಲಾಟೆ ನಡೆದಿದ್ದು ನಿಜ, ಆದರೆ ದರ್ಶನ್ ಯಾರಿಗೂ ಹೊಡೆದಿಲ್ಲ. ನಮ್ಮ ಕಾರ್ಮಿಕರಿಗೆ ಬೈದಿದ್ದಾರೆ ಅಷ್ಟೇ ಎಂದು ಸಂದೇಶ್ ದಿ ಪ್ರಿನ್ಸ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸ್ಪಷ್ಟಪಡಿಸಿದ್ದಾರೆ.
ಹೋಟೇಲಿನಲ್ಲಿ ವೇಟರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಣ್ಣ ಜಗಳ ಆಗಿದ್ದು ನಿಜ, ಆದರೆ ಹೊಡೆದಿಲ್ಲ ಬೈದಿದ್ದಾರೆ ಅಷ್ಟೆ. ಅಂದು ನಾನು ಕೂಡ ಇದ್ದೆ ಎಂದಿದ್ದಾರೆ.
ಈ ಘಟನೆ ನಡೆದು ಒಂದು ತಿಂಗಳು ಕಳೆದಿದೆ. ಈ ಬಗ್ಗೆ ನಮ್ಮ ತಂದೆಯವರಿಗೆ ಏನೂ ಗೊತ್ತಿಲ್ಲ. ಹೋಟೆಲ್ ನಡೆಸುತ್ತಿರುವುದು ನಾನು, ಹೀಗಾಗಿ ಅವರಿಗೂ ಈ ಘಟನೆಗೂ ಸಂಬಂಧವಿಲ್ಲ. ಕೆಲವರು ಪಬ್ಲಿಸಿಟಿಗೋಸ್ಕರ ಏನೇನೋ ಕ್ರಿಯೆಟ್ ಮಾಡಿಕೊಂಡು ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೂಲಕ ಅವರವರ ಮರ್ಯಾದೆ ಅವರವರೇ ತೆಗೆದುಕೊಳ್ಳುತ್ತಾ ಇದ್ದಾರೆ ಎಂದು ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
ಈ ಬಗ್ಗೆ ಇಂದ್ರಜಿತ್ ಲಂಕೇಶ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನ ಭೇಟಿಯಾಗಿ ದರ್ಶನ್ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಮತ್ತು ದರ್ಶನ್ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.
Click this button or press Ctrl+G to toggle between Kannada and English