ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆ, ಸಾರ್ವಜನಿಕರಿಂದ ದೂರು

11:25 PM, Thursday, July 15th, 2021
Share
1 Star2 Stars3 Stars4 Stars5 Stars
(No Ratings Yet)
Loading...

Bus Route ಮಂಗಳೂರು  : ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆಯ ಕುರಿತು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸಿಬ್ಬಂದಿಗಳಲ್ಲಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ‌ಶಾಸಕ ಕಾಮತ್, ಬಸ್ ಮಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಮಾರ್ಗ ಬದಲಾವಣೆಯ ಕುರಿತು ಒಪ್ಪಿಗೆ ಸೂಚಿಸಿದ ಬಳಿಕವೇ ಬಸ್ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ವರೆಗೆ ಬಸ್ ಮಾಲಕರ ಸಂಘದ ಪ್ರಮುಖರು ಆಗುತ್ತಿರುವ ತೊಂದರೆಯ ಕುರಿತು ನನ್ನ ಬಳಿ ಚರ್ಚಿಸಿಲ್ಲ. ಆ ಬಳಿಕ ಸಾರ್ವಜನಿಕವಾಗಿ ಸಮಸ್ಯೆಯ ಕುರಿತು ಮಾಹಿತಿ ದೊರೆತ ಕೂಡಲೆ ಬಸ್ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.

ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿ ನಡೆಸಿದ್ದೇನೆ. ಕೆಲವು ಕಡೆಗಳಲ್ಲಿ ರಸ್ತೆ ವಿಭಜಕಗಳನ್ನು ತೆರವುಗೊಳಿಸುವುದು ಸೇರಿದಂತೆ ಒಂದಷ್ಟು ಬದಲಾವಣೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದಂತೆ ಸರಿಪಡಿಸಲು ತಿಳಿಸಿದ್ದೇನೆ. ಸಂಚಾರಿ ಪೋಲಿಸರೊಂದಿಗೂ ಕೂಡ‌ ಈ ವಿಚಾರದ ಕುರಿತು ಸಭೆ ನಡೆಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಮಾಜಿ ಮೇಯರ್ ಹಾಗೂ ಸ್ಥಳೀಯ ಮನಪಾ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಮುತಾಲಿಬ್, ವಸಂತ್ ಜೆ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English