ಷರತ್ತಿಗೊಳಪಟ್ಟು ನಾಳೆಯಿಂದ ಕಾಸರಗೋಡು ಬಸ್ ಸಂಚಾರ ಆರಂಭ

8:14 PM, Sunday, July 18th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

KV Rajendraಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ದಿನಾಂಕ: 19-07-2021 ರಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ.

1) ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು,

2) .ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English