- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಚಿವ ಆರ್ ಅಶೋಕ್

R Ashoka [1]ಬೆಂಗಳೂರು  : ಕೋವಿಡ್-19 ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಧೈರ್ಯ ತುಂಬಿದರು.

ಆ ವೇಳೆ ಮಾತನಾಡಿದ ಸಚಿವರು “ಯಾರನ್ನೂ ಫೇಲ್ ಮಾಡುವದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆದ ಶ್ರೀ ಸುರೇಶ್ ಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಸ್ಕ್ ಗಳನ್ನು ನಾವೇ ಕೊಡುತ್ತೇವೆ, ಪರೀಕ್ಷಾ ಮೇಲ್ವಿಚಾರಕರಿಗೆ ಲಸಿಕೆ ಹಾಕಲಾಗಿದೆ. ಪ್ರತಿ ಬೆಂಚ್‍ಗೆ ಒಬ್ಬ ವಿದ್ಯಾರ್ಥಿ ಮಾತ್ರ, ಸರ್ಕಾರ ಎಲ್ಲ ರೀತಿಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿದೆ. ಆದ್ದರಿಂದ ಯಾರೂ ಟೆನ್ಷನ್ ತೆಗೆದುಕೊಳ್ಳುವ ಅಗತ್ಯವಿಲ್ಲ” ಎಂದರು.

ಮುಂದುವರಿದು ಮಾತನಾಡಿದ ಅಶೋಕ್ ಅವರು “ನಿಮ್ಮ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಸಮಯ ಇದಾಗಿದೆ ಎಂದು ನಾನು ಪೋಷಕರಲ್ಲಿ ವಿನಂತಿಸುತ್ತೇನೆ. ಚೆನ್ನಾಗಿ ಪರೀಕ್ಷೆ ಬರೆಯಲು ಅವರನ್ನು ಪ್ರೋತ್ಸಾಹಿಸೋಣ. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ, ಶಿಕ್ಷಣ ಇಲಾಖೆ ವಿಸ್ತಾರವಾದ ಸುರಕ್ಷತಾ ವ್ಯವಸ್ಥೆಗಳನ್ನು ಮಾಡಿದೆ. ಯಾರೂ ಚಿಂತಿಸಬೇಕಾಗಿಲ್ಲ ಎಂದು ನಿಮಗೆ ಭರವಸೆ ನೀಡುತ್ತಿದ್ದೇನೆ” ಎಂದು ಹೇಳಿದರು.