- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಚುನಾವಣೆಗಳು ಯುವ ಮುಖಂಡರಿಗೆ ಪರೀಕ್ಷೆಗಳಿದ್ದಂತೆ: ಆರ್ ಅಶೋಕ್

R Ashoka [1]ಬೆಂಗಳೂರು :  ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಶ್ರೀ ಆರ್ ಅಶೋಕ, ಸಿಎಂ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. “ಆಮ್ಲಜನಕಯುಕ್ತ ಹಾಸಿಗೆಗಳನ್ನು ಹೆಚ್ಚಿಸುವುದು, ವೈದ್ಯರಿಗೆ ತರಬೇತಿ ನೀಡುವುದು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ವೈದ್ಯರನ್ನು ಗುರುತಿಸುವುದು ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಳೆಗಾಲದಲ್ಲಿ ನೀರು ತುಂಬುವ ತಗ್ಗು ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಸಭೆ ನಡೆಸಲಾಗುವುದು. ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳಿಗೆ ತಡೆ ಉಂಟಾಗಬಾರದು ಎಂದು ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವು ಜುಲೈ 26 ರಂದು ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ ಮತ್ತು ಎಲ್ಲಾ ಸಚಿವರು ತಮ್ಮ ಸಾಧನೆಗಳನ್ನು ಪಟ್ಟಿ ಮಾಡಲು ತಿಳಿಸಲಾಗಿದೆ” ಎಂದು ಹೇಳಿದರು.

ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ: ಶ್ರೀ ಆರ್ ಅಶೋಕ
ಬಿ ಎಸ್ ಯಡಿಯೂರಪ್ಪ ಅವರೇ ಕರ್ನಾಟಕದ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಯಾವುದೇ ನಿರ್ದೇಶನಗಳನ್ನು ನೀಡಿಲ್ಲ. ಬಿಜೆಪಿ ಸರ್ಕಾರವು ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಿರುವುದರಿಂದ ಶಾಸಕರ ಸಭೆಯನ್ನು ಕರೆಯಲಾಗಿದೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ” ಎಂದು ಹೇಳಿದರು.

ಚುನಾವಣೆಗಳು ಯುವ ಮುಖಂಡರಿಗೆ ಪರೀಕ್ಷೆಗಳಿದ್ದಂತೆ: ಆರ್ ಅಶೋಕ್

ಚುನಾವಣೆಗಳು ಯುವ ಮುಖಂಡರಿಗೆ ಪರೀಕ್ಷೆಗಳಿದ್ದಂತೆ ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ಹೇಳಿದರು. ಭಾನುವಾರ ಬಿಜೆಪಿ ಯುವ ಮೋರ್ಚಾ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅಶೋಕ, “ಬಿಜೆಪಿ ಯುವ ಮೋರ್ಚಾ ಉದಯೋನ್ಮುಖ ನಾಯಕರಿಗೆ ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ. ಇದು ಯುವಕರಿಗೆ ಭವಿಷ್ಯದ ನಾಯಕರಾಗಲು ತರಬೇತಿ ನೀಡುತ್ತದೆ. ಮುಂದಿನ ಜಿಲ್ಲಾ ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆಗಳು ಯುವ ಕಾರ್ಯಕರ್ತರಿಗೆ ಪರೀಕ್ಷೆಗಳಿದ್ದಂತೆ. ಬಿಜೆಪಿ ಯುವ ಮೋರ್ಚಾ ನಾಯಕತ್ವ ಅಭಿವೃದ್ಧಿ ಕೇಂದ್ರ ಎಂದು ನಾನು ಭಾವಿಸುತ್ತೇನೆ. ಪ್ರತಿ ಯುವಕರಿಗೆ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದರ ಬಗ್ಗೆ ತಿಳುವಳಿಕೆ ಇರಬೇಕೆಂದು ನಾನು ಸೂಚಿಸುತ್ತೇನೆ. ಇದಕ್ಕಾಗಿ ಪ್ರತಿಯೊಬ್ಬ ಯುವ ನಾಯಕರು ಬೆಳಿಗ್ಗೆ ಪತ್ರಿಕೆಗಳನ್ನು ಓದಬೇಕು. ವಿದ್ಯಾರ್ಥಿಗಳಿಗೆ ಹೇಗೆ ಶ್ರಮಪಟ್ಟು ಪರೀಕ್ಷೆಗಳನ್ನು ಎದುರಿಸುತ್ತಾರೋ, ಹಾಗೆಯೇ ಯುವ ಮೋರ್ಚಾ ನಾಯಕನಿಗೂ ಚುನಾವಣೆಗಳು ಪರೀಕ್ಷೆ ಇದ್ದ ಹಾಗೆ. ಶ್ರಮಪಟ್ಟು ಕೆಲಸ ಮಾಡಿದರೆ ಮಾತ್ರ ರಾಜಕಾರಣಿ ಅಥವಾ ನಾಯಕನಾಗಿ ಪದವಿ ಪಡೆಯಲು ಸಾಧ್ಯ” ಎಂದು ಹೇಳಿದರು.