ಕಂದಾಯ ಸಚಿವ ಆರ್ ಅಶೋಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ

2:13 PM, Sunday, July 25th, 2021
Share
1 Star2 Stars3 Stars4 Stars5 Stars
(No Ratings Yet)
Loading...

Ashok-Flood-Area ಬೆಂಗಳೂರು  : ಅತಿವೃಷ್ಠಿಯಿಂದ ಹಾನಿಗೊಳಗಾಗಿರುವ ಹಾಸನ ಜಿಲ್ಲೆಯ ದೊಣಿಗಲ್‍ಗೆ ಕಂದಾಯ ಸಚಿವ ಆರ್ ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದೇನೆ. ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಮತ್ತು ರಸ್ತೆ ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಎನ್‍ಡಿಆರ್‍ಎಫ್ ನಿಧಿಯಡಿ ಪರಿಹಾರ ನೀಡುವಂತೆ ಡಿಸಿಗಳಿಗೆ ಆದೇಶಿಸಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರವಾಹ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ ರೂ. 5 ಲಕ್ಷ ಹಾಗೂ ರೂ. 10,000 ತಾತ್ಕಾಲಿಕ ಪರಿಹಾರವಾಗಿ ನೀಡಲಾಗುವುದು. ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 950 ಕೋಟಿ ಮೀಸಲಿರಿಸಿದೆ” ಎಂದರು.

Ashoka-Flood-Area ಮುಂದುವರಿದು ಮಾತನಾಡಿದ ಅವರು “ನಾಳೆ ಸಿಎಂ ಅವರೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಲಿದ್ದೇವೆ. ರಜೆ ತೆಗೆದುಕೊಳ್ಳದೆ ಜನರ ಸಹಾಯಕ್ಕೆ ಹಾಜರಾಗದಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಹಾಸನದಲ್ಲಿ ಸುಮಾರು 78 ಮನೆಗಳಿಗೆ ಹಾನಿಯಾಗಿದೆ ಮತ್ತು ಆರು ಮನೆಗಳು ಕುಸಿದಿವೆ. ಹಾಸನದಲ್ಲಿ 50 ಸೇತುವೆಗಳು ಮತ್ತು ಟ್ಯಾಂಕ್ ಬಂಡ್‍ಗಳು ಸಹ ಹಾನಿಗೊಂಡಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಆಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲು ಸೂಚಿಸಲಾಗಿದೆ” ಎಂದು ಹೇಳಿದರು. ಈ ವೇಳೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಸಂಸದರು, ಅಧಿಕಾರಿಗಳು ಉಪಸ್ಥಿತರಿದ್ದರು.

ವರಿಷ್ಠರ ತೀರ್ಮಾನದಂತೆ ಎಲ್ಲ ನಿರ್ಣಯ: ಆರ್ ಅಶೋಕ

ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಮುಂದುವರಿಯಲಿರುವುದರಿಂದ ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ಸ್ಪಷ್ಟಪಡಿಸಿದರು. “ಪ್ರಸ್ತುತ, ನಾವು ಪ್ರವಾಹ ಪರಿಹಾರ ಕಾರ್ಯಗಳತ್ತ ಗಮನ ಹರಿಸಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷ ಮತ್ತು ಎಲ್ಲಾ ನಿರ್ಧಾರಗಳನ್ನು ನಾಲ್ಕು ಗೋಡೆಗಳ ಮಧ್ಯೆ ತೆಗೆದುಕೊಳ್ಳಲಾಗುವುದು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಸಮರ್ಥ ತಂಡವಿದೆ. ಮಠಾಧೀಶರ ಬಗ್ಗೆ ನಮಗೆ ಅಪಾರ ಗೌರವವಿದೆ ಮತ್ತು ಅವರ ಸಲಹೆಗಳಿಗೆ ಧನ್ಯವಾದಗಳು. ಆದಾಗ್ಯೂ, ಪಕ್ಷದ ಹೈಕಮಾಂಡ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ನಾನು ಸೇರಿದಂತೆ ಎಲ್ಲರೂ ಹೈಕಮಾಂಡ್‍ನ ನಿರ್ಧಾರಗಳಿಗೆ ಬದ್ಧರಾಗಿದ್ದೇವೆ” ಎಂದರು.

Ashoka-Flood-Area

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English