ಇರುವಕ್ಕಿಯಲ್ಲಿ ನೂತನ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಉದ್ಘಾಟನೆ 

2:54 PM, Sunday, July 25th, 2021
Share
1 Star2 Stars3 Stars4 Stars5 Stars
(No Ratings Yet)
Loading...

Iruvakkiಬೆಂಗಳೂರು :ಶಿವಮೊಗ್ಗ ಜಿಲ್ಲೆಯ ಸಾಗರ  ತಾಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿ   ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.

ಈ ನೂತನ ಕೃಷಿ  ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ,ಮಲೆನಾಡು , ಅರೆ ಮಲೆನಾಡು , ಬಯಲುಸೀಮೆ ಮತ್ತು ಕರಾವಳಿ ಪ್ರದೇಶಗಳಿಗೆ ವಿಶೇಷವಾದ ಹಾಗೂ ಕೃಷಿ , ತೋಟಗಾರಿಕೆ ಹಾಗೂ ಅರಣ್ಯ ಶಾಸ್ತ್ರ ಹೊಂದಿದ ಸಮಗ್ರ ವಿಶ್ವವಿದ್ಯಾಲಯವನ್ನು 2013 ರಲ್ಲಿ ಪ್ರಾರಂಭಿಸಿದರು . ಈ ವಿಶ್ವವಿದ್ಯಾಲಯವು ಸಿಎಂ ಬಿ.ಎಸ್ . ಯಡಿಯೂರಪ್ಪನವರ ಕನಸಿನ ಕೂಸಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ . ಯಡಿಯೂರಪ್ಪನವರು ಈ ವಿಶ್ವವಿದ್ಯಾಲಯವನ್ನು 2013 ರಲ್ಲಿ ಹುಟ್ಟು ಹಾಕಿ ತಾವೇ ತಮ್ಮ ಅಮೃತ ಹಸ್ತದಿಂದ ಇಂದು ಸದರೀ ನೂತನ ವಿಶ್ವವಿದ್ಯಾಲಯದ ಆವರಣವನ್ನು ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿ ಉದ್ಘಾಟನೆ ಮಾಡುತ್ತಿರುವುದು ರಾಜ್ಯದ ಅದರಲ್ಲಿಯೂ ವಿಶೇಷವಾಗಿ ಮಲೆನಾಡಿನ ರೈತರಿಗೆ ಒಂದು ವರದಾನವಾಗಿದೆಂದು ಬಿಸಿಪಿ ಅಭಿಪ್ರಾಯಪಟ್ಟರು.

ಈ ವಿಶ್ವವಿದ್ಯಾಲಯಕ್ಕೆ 787 ಎಕರೆ ಜಮೀನನ್ನು ನೀಡಿ 155 ಕೋಟಿ ರೂ.ಗಳನ್ನು ಮಂಜೂರು ಮಾಡಿ ಇರುವ ನೂತನ ಆವರಣ ಅಭಿವೃದ್ಧಿಗೆ ಸರ್ಕಾರವು ಆದೇಶ ಹೊರಡಿಸಿತ್ತು.ಇದರ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಶಿವಮೊಗ್ಗ , ಚಿಕ್ಕಮಗಳೂರು , ದಾವಣಗೆರೆ , ಚಿತ್ರದುರ್ಗ , ಉಡುಪಿ , ಕೊಡಗು ಮತ್ತು ಮಂಗಳೂರು ಸೇರಿ ಒಟ್ಟು 7 ಜಿಲ್ಲೆಗಳು ಸೇರುತ್ತವೆ . ಸರ್ಕಾರದ ಆದೇಶದಂತೆ ಇರುವ ಆವರಣದಲ್ಲಿ 4 ಲಕ್ಷ 95 ಸಾವಿರ ಚದುರ ಅಡಿ ಪ್ರದೇಶದಲ್ಲಿ ಆಡಳಿತ ಭವನ , ಬೆಳೆ ಉತ್ಪಾದನೆ ಮತ್ತು ಬೆಳೆ ಸಂರಕ್ಷಣಾ ವಿಭಾಗ , ಬೆಳೆ ಅಭಿವೃದ್ಧಿ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ , ಸಮಾಜ ಮತ್ತು ಮೂಲ ವಿಜ್ಞಾನಗಳ ವಿಭಾಗ , ತೋಟಗಾರಿಕೆ ಮತ್ತು ಅರಣ್ಯ ವಿಭಾಗ , ಗ್ರಂಥಾಲಯ , ಕೊಳಚೆ ನೀರು ಶುದ್ದೀಕರಣ ಘಟಕ ಹಾಗೂ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ನಿಲಯಗಳನ್ನು ನೂತನವಾಗಿ ನಿರ್ಮಿಸಲಾಗಿದೆ . ಇದೊಂದು ಸಮಗ್ರ ಕೃಷಿ ವಿಶ್ವವಿದ್ಯಾಲಯವಾಗಿದ್ದು , ಇಲ್ಲಿ ಹಂತ ಹಂತವಾಗಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೃಷಿ , ತೋಟಗಾರಿಕೆ ಹಾಗೂ ಅರಣ್ಯ ವಿಭಾಗಗಳಲ್ಲಿ ಸ್ನಾತಕ , ಸ್ನಾತಕೋತ್ತರ ಮತ್ತು ಪಿ.ಹೆಚ್.ಡಿ. ಪದವಿಗಳನ್ನು ನೀಡಲು ಮೂಲ ಸಂಪನ್ಮೂಲಗಳನ್ನು ಅಭಿವೃದ್ಧಿ ಪಡಿಸಲಾಗಿದೆ.ಈ ವಿಶ್ವವಿದ್ಯಾಲಯದ ಅಡಿಯಲ್ಲಿ 4 ಪದವಿ ಕಾಲೇಜುಗಳು , 2 ಡಿಪ್ಲೊಮೋ ಕಾಲೇಜುಗಳು , 13 ಸಂಶೋಧನಾ ಕೇಂದ್ರಗಳು , 4 ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ 2 ವಿಸ್ತರಣಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದೆ . • ವಿಶ್ವವಿದ್ಯಾಲಯವು ಭತ್ತದಲ್ಲಿ ಕೆ.ಪಿ.ಆರ್ -1 , ಕೆ.ಕೆ.ಪಿ -5 , ಐ.ಇ.ಟಿ -21179 , ಪ್ರಗತಿ , ಸಹ್ಯಾದ್ರಿ ಮೇಘ , ಸಹ್ಯಾದ್ರಿ ಪಂಚಮುಖಿ , ಸಹ್ಯಾದ್ರಿ ಕಾವೇರಿ ತಳಿಗಳನ್ನು ಹಾಗೂ ಅಡಿಕೆಯಲ್ಲಿ ಮೈದಾನ ಸ್ಥಳೀಯ ಮತ್ತು ಅಲಸಂದೆಯಲ್ಲಿ ಸಹ್ಯಾದ್ರಿ ಯುಕ್ತಿ ತಳಿಗಳನ್ನು ಅಭಿವೃದ್ಧಿ ಪಡಿಸಿದೆ .

ವಿಶ್ವವಿದ್ಯಾಲಯದ ಪ್ರಾರಂಭದಿಂದ 2019-20 ರವರೆಗೆ 389 ಟನ್ ಗುಣಮಟ್ಟದ ಬೀಜಗಳನ್ನು ಹಾಗೂ 39 ಲಕ್ಷ ಸಸಿಗಳನ್ನು ಉತ್ಪಾದಿಸಿ ರೈತರಿಗೆ ವಿತರಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English