- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ನೀಡುತ್ತಿದ್ದ ಹಿಂದೂ ದೇವಸ್ಥಾನದ ಹಣಕ್ಕೆ ಧಾರ್ಮಿಕ ದತ್ತಿ ಇಲಾಖೆಯಿಂದ ತಡೆ

kota Srinivasa Poojary [1]ಮಂಗಳೂರು  :  ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ನೀಡುವಂತೆ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ.

ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಇಂದು ಅಧಿಕೃತ ಆದೇಶ ಹೊರಡಿಸಿದೆ.

ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ.