ಬೆಳಗಾವಿ : ರಾಜ್ಯದಲ್ಲಿ ಪ್ರವಾಹ ಸಂದರ್ಭದಲ್ಲೇ ‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಸೋಮವಾರ ರಾತ್ರಿ ಪ್ರವಾಸಿಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ಹೇಳಿದ್ದಾರೆ.
‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ಇಲ್ಲ. ಇದು ಕರ್ನಾಟಕದ ದುರ್ದೈವವೆ ಸರಿ ಎಂದರು.
ಯಡಿಯೂರಪ್ಪ ಕೇರ್ ಟೇಕರ್ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ ಪಡೆಯಬೇಕಿತ್ತು. ಪ್ರವಾಹದ ಸಂದರ್ಭದಲ್ಲಿ ರಾಜೀನಾಮೆ ಕೊಡಿಸಿದ್ದು ಸರಿಯಲ್ಲ’ ಎಂದು ಸಿದ್ದರಾಮಯ್ಯ ಹೇಳಿದರು.
‘ನೆರೆ ಬಂದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಪ್ರವಾಹವೇ ಬಂದಿಲ್ಲ ಎನ್ನುವ ಸಚಿವರದು ಬೇಜವಾಬ್ದಾರಿ ಹೇಳಿಕೆ. ಹಾಗಿದ್ದರೆ ಮುಖ್ಯಮಂತ್ರಿ ಇಲ್ಲಿಗೇಕೆ ಬಂದಿದ್ದರು. ಶೋಕಿ ಮಾಡಲು ಬಂದಿದ್ದರಾ? ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದೇನೆ ಎನ್ನುವಾಗ ಕಾಟಾಚಾರಕ್ಕೆಂದು ಇಲ್ಲಿ ಪ್ರವಾಸ ಕೈಗೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.
Click this button or press Ctrl+G to toggle between Kannada and English