ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ ಬಸವರಾಜ ಬೊಮ್ಮಾಯಿ ಕರ್ನಾಟಕ ಮುಖ್ಯಮತ್ರಿಯಾಗಿ ನೇಮಕ

8:26 PM, Tuesday, July 27th, 2021
Share
1 Star2 Stars3 Stars4 Stars5 Stars
(4 rating, 1 votes)
Loading...

Basavaraja-Bommai
ಬೆಂಗಳೂರು : ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಶಾಸಕಾಂಗ ಸಭೆಯ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಘೋಷಿಸಿದ್ದಾರೆ.

2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಎಸ್ಆರ್ ಬೊಮ್ಮಾಯಿ-ಚೆನ್ನಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ ಬೊಮ್ಮಾಯಿ ಬಿ.ವಿ ಬೊಮ್ಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದ ಬೊಮ್ಮಾಯಿ ಮೂಲತಃ ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ.

Basavaraja-Bommai ನೀರಾವರಿ ಯೋಜನೆಗಳಲ್ಲಿ ಹಾಗೂ ನೀರಾವರಿ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿರುವ ಅವರು, ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದಲ್ಲೇ ಮೊದಲ ಶೇ.100 ರಷ್ಟು ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು ಸೇರಿದಂತೆ ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಯಡಿಯೂರಪ್ಪ ಅವರ ಸಂಪುಟದಲ್ಲಿ ಮುಖ್ಯಮಂತ್ರಿಗಳ ಬಳಿಕ ಎರಡನೇ ಪ್ರಬಲ ಖಾತೆಯಾದ ಗೃಹ ಖಾತೆಯನ್ನೂ ನಿರ್ವಹಿಸಿ ಅನುಭವ ಹೊಂದಿರುವ ಬೊಮ್ಮಾಯಿ ಅವರು ತಮ್ಮ ರಾಜಕೀಯವನ್ನು ಪ್ರಾರಂಭಿಸಿದ್ದು ಜನತಾದಳದಿಂದ.

Basavaraja-Bommai 1998 ಹಾಗೂ 2004 ರಲ್ಲಿ ಧಾರವಾಡ ಸ್ಥಳೀಯ ಅಧಿಕಾರಿಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು. 2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. 2008 ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಬೊಮ್ಮಾಯಿ ಆಯ್ಕೆಗೊಂಡಿದ್ದರು.

ವಿರೋಧಪಕ್ಷದ ಉಪನಾಯಕ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸಚಿವರಾಗಿ, ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವವನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ.

ಜನತಾದಳದಿಂದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್ ಆರ್ ಬೊಮ್ಮಾಯಿ) ಅವರು ಮುಖ್ಯಮಂತ್ರಿಯಾಗಿದ್ದ (1988-89) 32-33 ವರ್ಷಗಳ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ನಾಳೆ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Basavaraja-Bommai

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English