ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದರು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಕೋವಿಡ್ ಪರಿಸ್ಥಿತಿ ಮತ್ತು ಮಳೆಹಾನಿ, ಕೈಗೊಳ್ಳಬೇಕಾದ ಪರಿಸ್ಥಿತಿಗಳ ಬಗ್ಗೆ ಶೀಘ್ರವೇ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ, ಶೀಘ್ರವೇ ಸಂಪುಟ ರಚನೆ ಬಗ್ಗೆ ಕೂಡ ಕ್ರಮ ಕೈಗೊಳ್ಳುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Click this button or press Ctrl+G to toggle between Kannada and English