ಮಂಗಳೂರು : ಠಾಣೆಗೆ ದೂರು ಕೊಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೊಬೈಲ್ ನಂಬರ್ ಪಡೆದು ಆಕೆಯ ಜತೆ ಮೊಬೈಲ್ ಫೋನ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ನಗರದ ಪೊಲೀಸ್ ಠಾಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದರು.
ಸಾಕಷ್ಟು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನಿನ್ನೆಯೇ ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭ ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English