ಬೆಳ್ತಂಗಡಿ : ಮದ್ದಡ್ಕದಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸ್ಥಳದಲ್ಲಿ ಗುರುವಾರ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಾಮಗಾರಿಗೆ ಬಳಸುತ್ತಿದ್ದ ಭಾರೀ ವಾಹನವೊಂದರ ಅಡಿಗೆ ಸಿಲುಕಿ ವೃದ್ಧರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರಾದವರು ಬಂಗಾಡಿ ನಿವಾಸಿ ಎಂದು ಗುರುತಿಸಲಾಗಿದೆ.
ವೃದ್ಧರು ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿಯ ಯಂತ್ರವನ್ನು ಚಲಾಯಿಸುತ್ತಿದ್ದ ಚಾಲಕನು ನಡೆದುಕೊಂಡು ಹೋಗುತ್ತಿದ್ದ ವೃದ್ಧರನ್ನು ಗಮನಿಸಲಿಲ್ಲ ಎಂದು ತಿಳಿದು ಬಂದಿದೆ. ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ಪರಿಣಾಮ ವೃದ್ಧರು ವಾಹನದ ಅಡಿಯಲ್ಲಿ ಸಿಲುಕಿಕೊಂಡು ಕೊನೆಯುಸಿರೆಳೆದಿದ್ದಾರೆ.
ಘಟನೆ ನಡೆದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









