ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದು, ಸ್ಥಳದಲ್ಲೇ ಸಾವು

10:52 PM, Thursday, July 29th, 2021
Share
1 Star2 Stars3 Stars4 Stars5 Stars
(No Ratings Yet)
Loading...

Mudipu-Accidentಕೊಣಾಜೆ: ಮುಡಿಪು ಬಳಿ ಸ್ಕೂಟರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಮೃತನನ್ನು ಉಪ್ಪಳ ಮೂಲದ ಜೌಹಾರ್ (20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು, ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಬಾಳೆಪುಣಿ ಕಡೆಯಿಂದ ಮುಡಿಪು ಕಡೆಗೆ ಹೋಗುತ್ತಿದ್ದ ವೇಳೆ ಮುಡಿಪು ಪೆಟ್ರೋಲ್ ಪಂಪು ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟ ಕಾರಣ ಅದೇ ವೇಳೆ ಬಂದ ಬಸ್ ನಡಿಗೆ ಬಿದ್ದು ಸವಾರ ಕೊನೆಯುಸಿರೆಳೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English