- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಲ್ಲಿದೆ ನೋಡಿ

cbse-result [1]ಬೆಂಗಳೂರು  : ಸರಕಾರ  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಿದೆ.

ಜುಲೈ 30ರಂದು ಮಧ್ಯಾಹ್ನ ಪ್ರಕಟಗೊಂಡಿರುವ CBSE 12ನೇ ತರಗತಿ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in [2] ಇಲ್ಲವೇ cbseresults.nic.in [3] ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ ನೋಡಬಹುದು. ಅಲ್ಲದೇ ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶ ಪಡೆಯಬಹುದು.

2021ರ ಸಿಬಿಎಸ್‌ಇ 12ನೇ ತರಗತಿಯಲ್ಲಿ ಶೇ.99.37 ಫಲಿತಾಂಶದೊಂದಿಗೆ 12.96 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದೆಹಲಿ ವಿದ್ಯಾರ್ಥಿಗಳು ಶೇ.99.84ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ.

ಜೂ.1ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 12ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡಲಾಗಿತ್ತು. ಇದರ ಬೆನ್ನಲ್ಲೇ ಐಸಿಎಸ್‌ಇ ಪರೀಕ್ಷೆ ರದ್ದು ಮಾಡಲಾಗಿತ್ತು.

ಈ ಬಾರಿ ಸಿಬಿಎಸ್ಇ 12ನೇ ತರಗತಿ ಫಲಿತಾಂಶ 30:30:40 ಸೂತ್ರದಡಿ ತಯಾರಿಸಲಾಗಿದೆ. 10 ಮತ್ತು 11ನೇ ತರಗತಿ ಅಂತಿಮ ಪರೀಕ್ಷೆ ಅಂಕ ಮತ್ತು 12ನೇ ತರಗತಿಯಲ್ಲಿ ಈಗಾಗಲೇ ನಡೆಸಿರುವ ಪೂರ್ವ ಸಿದ್ಧತಾ ಪರೀಕ್ಷೆಗಳ ಅಂಕ ಆಧರಿಸಿ 30:30:40 ಅನುಪಾತ ಆಧರಿಸಿ ಫಲಿತಾಂಶ ಪ್ರಕಟಿಸಲಾಗಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ರದ್ದಾದ 12ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ಫಲಿತಾಂಶ ಇಂದು, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪ್ರಕಟಗೊಳ್ಳಲಿದೆ. 10 ಹಾಗೂ 11ನೇ ತರಗತಿಯ ಫೈನಲ್ ರಿಸಲ್ಟ್ ಹಾಗೂ 12ನೇ ತರಗತಿಯ ಪ್ರೀ ಬೋರ್ಡ್‌ ಎಕ್ಸಾಂ ಅಂಕಗಳನ್ನಾಧರಿಸಿ ಈ ಫಲಿತಾಂಶ ನೀಡಲಾಗುತ್ತದೆ.

ಸಿಬಿಎಸ್‌ಇ ಮಂಡಳಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಅಧಿಕೃತ ವೆಬ್‌ಸೈಟ್ cbseresults.nic.in [3] ಅಥವಾ cbse.gov.in ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಸಿಬಿಎಸ್‌ಇ’ಯು ವಿದ್ಯಾರ್ಥಿಗಳ ಫಲಿತಾಂಶದೊಂದಿಗೆ, ಅಂಕಪಟ್ಟಿಯನ್ನು ಡಿಜಿಲಾಕರ್‌ನಲ್ಲಿ ಬಿಡುಗಡೆ ಮಾಡಲಿದೆ. ಇದನ್ನು ಚೆಕ್‌ ಮಾಡಲು ಸಿಬಿಎಸ್‌ಇ ರೋಲ್‌ ನಂಬರ್ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಸಿಬಿಎಸ್‌ಇ’ಯೊಂದಿಗೆ ರಿಜಿಸ್ಟರ್ ಆದ ಮೊಬೈಲ್ ನಂಬರ್ ಬಳಸಿ ಫಲಿತಾಂಶವನ್ನು ಡಿಜಿಲಾಕರ್‌ನಲ್ಲಿ ಪಡೆಯಬಹುದು.

ಅಂದಹಾಗೆ ಸಿಬಿಎಸ್ಇ‌ ಫಲಿತಾಂಶವನ್ನು ಮೂರು ಮಾದರಿಯಲ್ಲಿ ಚೆಕ್‌ ಮಾಡಬಹುದು. ಸಿಬಿಎಸ್‌ಇ ಪಠ್ಯಕ್ರಮ ಶಿಕ್ಷಣ ಸಂಸ್ಥೆಗಳು ಒಂದು ವೇಳೆ ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್ ನೀಡಿದರೆ ಇದರ ಮೂಲಕ ರಿಸಲ್ಟ್‌ ಚೆಕ್‌ ಮಾಡಬಹುದು. ಅಥವಾ ಡಿಜಿಲಾಕರ್‌ ಮೂಲಕ ಚೆಕ್‌ ಮಾಡಬಹುದು. ಅಥವಾ ಸಿಬಿಎಸ್‌ಇ’ಯು ವಿದ್ಯಾರ್ಥಿಗಳ ರಿಜಿಸ್ಟರ್ ಮೊಬೈಲ್‌ ನಂಬರ್‌ಗೆ ನೇರವಾಗಿ ಫಲಿತಾಂಶ ಕಳುಹಿಸುವ ಅವಕಾಶವು ಇದೆ.

ಸಿಬಿಎಸ್‌ಇ ಕೊನೆಯ ದಿನಾಂಕವನ್ನು ಜುಲೈ 22 ರಿಂದ ಜುಲೈ 25 ರವರೆಗೆ ವಿಸ್ತರಿಸಲು ನಿರ್ಧರಿಸಿತ್ತು. ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಪರೀಕ್ಷೆಗಳನ್ನು ರದ್ದು ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ alternative evaluation policy [4] ಆಧಾರದ ಮೇಲೆ ಫಲಿತಾಂಶವನ್ನು ನೀಡುವಂತೆ ಸೂಚಿಸಲಾಗಿತ್ತು.

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶದಿಂದ ಅತೃಪ್ತರಾಗಿದ್ದೀರಾ? ಹೀಗೆ ಮಾಡಿ ಈ ವರ್ಷ ಯಾವುದೇ ಪರೀಕ್ಷೆಗಳು ನಡೆದಿಲ್ಲವಾದ್ದರಿಂದ ವಿದ್ಯಾರ್ಥಿಗಳಿಗೆ ಮರುಪರಿಶೀಲಿಸುವ ಯಾವುದೇ ಆಯ್ಕೆಗಳಿಲ್ಲ. ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಒಂದೊಮ್ಮೆ ನೀಡಲಾಗಿರುವ ಅಂಕಗಳಿಂದ ವಿದ್ಯಾರ್ಥಿಗಳು ಅತೃಪ್ತರಾಗಿದ್ದರೆ ಅವರು ಆಫ್‌ಲೈನ್ ಪರೀಕ್ಷೆಗೆ ಹಾಜರಾಗಬಹುದು.