ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಿಗೆ ಮನವಿ

10:23 PM, Friday, July 30th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Bommai-Modi-Meetಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿಯವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English