ಸೈಲೆನ್ಸ್‌ರ್‌ ವಿರೂಪಗೊಳಿಸಿ ಚಾಲನೆ ನಡೆಸುತ್ತಿದ್ದ ವಾಹನಗಳ ವಿರುದ್ದ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ

12:16 PM, Sunday, August 1st, 2021
Share
1 Star2 Stars3 Stars4 Stars5 Stars
(No Ratings Yet)
Loading...

sound-polutionಬೆಂಗಳೂರು : ವಿರೂಪಗೊಳಿಸಿದ ಹಾಗೂ ಮಾರ್ಪಾಡಿತ ಸೈಲೆನ್ಸ್‌ರ್‌ ವಿರುದ್ದ ಸಾರಿಗೆ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿ 300 ಹೈ ಎಂಡ್‌ ಬೈಕ್‌ ಹಾಗೂ 60 ಕ್ಕೂ ಹೆಚ್ಚು ಕಾರುಗಳ ಪರಿಶೀಲನೆ ನಡೆಸಿದರು.

ಸಾರಿಗೆ ಇಲಾಖೆ ಅಪರ ಮುಖ್ಯ ಆಯುಕ್ತರಾದ ನರೇಂದ್ರ ಹೋಳ್ಕರ್‌ ಹಾಗೂ ಜಂಟಿ ಸಾರಿಗೆ ಆಯುಕ್ತರಾದ ಹಾಲಪ್ಪಸ್ವಾಮಿ ನೇತೃತ್ವದಲ್ಲಿ ರಚಿಸಲಾಗಿದ್ದ‌ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್‌ ರಾಜಣ್ಣ, ಮೋಟಾರ್‌ ವಾಹನ ನೀರೀಕ್ಷಕರುಗಳಾದ ರಂಜಿತ್‌ (ದೇವನಹಳ್ಳಿ ಭಾಗದಲ್ಲಿ) ಚೇತನ್‌, ಸುಧಾಕರ್‌, ಸುಂದರ್‌ ಮತ್ತು ರಂಜೀತ್‌ (ನೆಲಮಂಗಲ-ಹಾಸನ ಟೋಲ್‌ಗೇಟ್‌) ಅವರನ್ನೊಳಗೊಂಡ ಮೂರು ತಂಡ ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ನಡೆಸಿತು.

ಸೈಲೆನ್ಸರ್‌ ವಿರೂಪಗೊಳಿಸಿ ವಾರಾಂತ್ಯಗಳಲ್ಲಿ ಜಾಲಿ ರೈಡ್‌ ಗೆ ಮಾತ್ರ ಹಲವಾರು ವಾಹನಗಳನ್ನು ಬಹಳಸಲಾಗುತ್ತಿರುವ ಅಂಶ ಸಾರಿಗೆ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಇದನ್ನು ತಡೆಗಟ್ಟುವ ಹಾಗೂ ಪತ್ತೆಹಚ್ಚುವ ನಿಟ್ಟಿನಲ್ಲಿ ಇಂದು ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಸಂಧರ್ಭದಲ್ಲಿ 300 ಕ್ಕೂ ಹೆಚ್ಚು ಬೈಕುಗಳು ಹಾಗೂ 60 ಕ್ಕೂ ಹೆಚ್ಚು ಕಾರುಗಳನ್ನು ತಪಾಸಣೆಗೊಳಿಸಲಾಯಿತು. ಈ ವೇಳೆ ಸೈಲೆನ್ಸರ್‌ ವಿರೂಪಗೊಳಿಸದ್ದ 40 ಕ್ಕೂ ಹೆಚ್ಚು ವಾಹನಗಳ ಮೇಲೆ ದೂರು ದಾಖಲಿಸಿದ್ದು, ಅವುಗಳ ಆರ್‌ ಸಿ ರದ್ದುಗೊಳಿಸುವುದಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಮೋಟಾರ್‌ ವಾಹನ ನಿರೀಕ್ಷಕ ಸುಧಾಕರ್‌ ತಿಳಿಸಿದರು.

bike

ಬೈಕುಗಳನ್ನು ನಿಯಮಬಾಹಿರವಾಗಿ ಮಾರ್ಪಾಡು ಮಾಡುತ್ತಿದ್ದ ಗ್ಯಾರೇಜ್‌ ಮೇಲೆ ದಾಳಿ ಮಾಡಿದ ಜ್ಞಾನಭಾರತಿ ಸಹಾಯಕ ಪ್ರದೇಶಿಕ ಸಾರಿಗೆ ಅಧಿಕಾರಿ ರಾಜಣ್ಣ ನೇತೃತ್ವದ – ಮೋಟಾರು ವಾಹನ ನಿರೀಕ್ಷಕರಾದ ಸುಧಾಕರ್‌, ರಂಜೀತ್‌ ಅವರ ತಂಡ ಓಂದು ಬೈಕ್‌ ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಈ ರೀತಿ ನಿಯಮಬಾಹಿರವಾಗಿ ಮಾರ್ಪಾಡು ಮಾಡುತ್ತಿದ್ದ ಗ್ಯಾರೇಜ್‌ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English