ಕೇರಳ – ಕರ್ನಾಟಕ ಗಡಿಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮ – ಎಡಿಜಿಪಿ ಪ್ರತಾಪ್ ರೆಡ್ಡಿ

6:33 PM, Tuesday, August 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Kerala Borderಮಂಗಳೂರು  :  ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಜೊತೆ ಕೇರಳ – ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ  ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಆಗಮಿಸಿ ಪರಿಶೀಲನೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ – ಕರ್ನಾಟಕ ಗಡಿಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಪಾಲಿಸಲಾಗುತ್ತಿದೆ.  ತಲಪಾಡಿಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್,  ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ  ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಕೇವಲ ತುರ್ತು ಭೇಟಿ ಹಾಗೂ ಕೇರಳ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿದರೆ ಅವಕಾಶ ನೀಡಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಬಿಗಿ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಕೇರಳದಿಂದ ರೈಲು ಮಾರ್ಗವಾಗಿ ಬರುವವರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಮಂಗಳೂರಿನ ಪುರಭವನದಲ್ಲಿ ಪರೀಕ್ಷಾ ಕೇಂದ್ರ ತೆರೆದಿರುವುದಾಗಿ ಪ್ರತಾಪ್ ರೆಡ್ಡಿ ಹೇಳಿದರು. ಕಾಸರಗೋಡು ಡಿಸಿ, ಎಸ್ಪಿ ಜತೆ ಜಿಲ್ಲೆಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು.  ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡದಂತೆ ಕ್ರಮ ವಹಿಸುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.,ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English