ಬೆಳ್ತಂಗಡಿ : ವೇಣೂರು ಪೊಲೀಸರು ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಮತ್ತು ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಎಂದು ಗುರುತಿಸಲಾಗಿದೆ. ನ್ಯಾಯಾಲಯವು ಬಂಧಿತರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕಳವು ನಡೆದ ದಿನಾಂಕ ನವೆಂಬರ್ 11. ಆ ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಅವರು ತಮ್ಮ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ ಅದನ್ನು ಪಾಣೂರಿನಲ್ಲಿ ನಿಲ್ಲಿಸಿ ತೆರಳಿದ್ದರು. ಮರುದಿನ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿದ್ದು, ಈ ಸಂಬಂಧ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನವೆಂಬರ್ 20 ರಂದು ವೇಣೂರು ಠಾಣೆಯ ಪಿಎಸ್ಐ ಓಮನ ಮತ್ತು ಸಿಬ್ಬಂದಿ ಅವರು ವೇಣೂರಿನ ಕೆರೆಕೋಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ನೋಂದಣಿ ಸಂಖ್ಯೆ ಇಲ್ಲದ ಬೈಕಿನಲ್ಲಿ ಇಬ್ಬರು ಯುವಕರು ಬಂದರು. ಪೊಲೀಸರು ತಡೆದು ತಪಾಸಣೆ ಮಾಡಿದಾಗ ಬೈಕಿಗೆ ಸಂಬಂಧಿಸಿದ ಯಾವುದೇ ದಾಖಲೆ ಇರಲಿಲ್ಲ. ಬಳಿಕ ಅವರನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ, ಇದು ಕಳವು ಮಾಡಿರುವ ಬೈಕ್ ಎಂದು ತಿಳಿದುಬಂದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









