ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ

10:49 PM, Wednesday, August 4th, 2021
Share
1 Star2 Stars3 Stars4 Stars5 Stars
(No Ratings Yet)
Loading...

DK journalistsಹಾಸನ: 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಸನದ ಹೊಳೆನರಸೀಪುರ ರಸ್ತೆಯಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್ ನಲ್ಲಿ
ಆಗಸ್ಟ್ 3 ರಂದು ಸಂಜೆ ನಡೆದ ಅಭಿನಂದನಾ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳನ್ನು ಹಾಗೂ ಯಶಸ್ವಿ ಸಮ್ಮೇಳನದ ವಿವಿಧ ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

ಸಮಾರಂಭವನ್ನು ಹಾಸನ ಜಿಲ್ಲಾಧಿಕಾರಿ ಗಿರೀಶ್ ಉದ್ಘಾಟಿಸಿದರು. ಪತ್ರಕರ್ತರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀನಿವಾಸ ಗೌಡ ಅಭಿನಂದಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಆರ್.ಪ್ರಸನ್ನಕುಮಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ,ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ.ಪರಮೇಶ್ ಮತ್ತು ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಭಾಗವಹಿಸಿದ್ದರು.

ವಿಶೇಷ ಆಹ್ವಾನಿತರಾಗಿ ರಾಜ್ಯಪತ್ರಕರ್ತರ ಭವನ ಸಮಿತಿ ಸದಸ್ಯ ಹೆಚ್.ಬಿ.ಮದನಗೌಡ, ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಜೆ.ಆರ್. ಕೆಂಚೇಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ರವಿ ನಾಕಲಗೂಡು,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪಡುಬಿದ್ರೆ, ಭಾಗವಹಿಸಿದ್ದರು.

ನೂತನವಾಗಿ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಟಿ.ವಿ.ಶಿವಾನಂದ ತಗಡೂರು, ಜಗನ್ನಾಥ ಶೆಟ್ಟಿ ಬಾಳ ಮಂಗಳೂರು ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ಪದಾಧಿಕಾರಿಗಳು, ದ.ಕ.ಜಿಲ್ಲೆಯ ವಿವಿಧ ತಾಲೂಕು ಸಂಘದ ಅಧ್ಯಕ್ಷರುಗಳು, ಸದಸ್ಯರು ಭಾಗವಹಿಸಿದ್ದರು. ಪತ್ರಕರ್ತರ ಸಂಘದ ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ವಸತಿ ವ್ಯವಸ್ಥೆಯ ಸಂಚಾಲಕ ಭಾಸ್ಕರ ರೈ ಕಟ್ಡ ಸೇರಿದಂತೆ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗು ಮದನ್ ಗೌಡ ಸನ್ಮಾನಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English