- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದಲ್ಲಿರುವ 29 ಮಂತ್ರಿಗಳ ವಿವರ

BSB-team [1]ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ. ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ.  13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ – ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯವಿಲ್ಲ.

ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ.

ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ ಸಿ‌ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಸಚಿವರಿಗೆ ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.