ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ನಿರ್ದೇಶನ ಮತ್ತು ಮಾನ್ಯ ಜಿಲ್ಲಾಧಿಕಾರಿಗಳ ಸಲಹೆಯಂತೆ ಇಂದು (ಆಗಸ್ಟ್ 05) ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ, ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದೂಡಲಾಗಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಆಗಸ್ಟ್ 11 (ಬುಧವಾರ) ರಿಂದ ಕೊವಿಡ್ ಶಿಷ್ಟಾಚಾರದೊಂದಿಗೆ ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯನ್ನು ಕಾಲೇಜಿನ ವೆಬ್‌ಸೈಟ್ ಮೂಲಕ ತಿಳಿಸಲಾಗುವುದು. ವಾಹನ ಸೌಲಭ್ಯ ಅಥವಾ ಕೊವಿಡ್ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು.
Click this button or press Ctrl+G to toggle between Kannada and English