- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳು ಆಗಸ್ಟ್‌ 11 (ಬುಧವಾರ) ರಿಂದ ಮರು ಪ್ರಾರಂಭ

Mangalore University [1]ಮಂಗಳೂರು :  ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ನಿರ್ದೇಶನ ಮತ್ತು ಮಾನ್ಯ ಜಿಲ್ಲಾಧಿಕಾರಿಗಳ ಸಲಹೆಯಂತೆ ಇಂದು (ಆಗಸ್ಟ್‌ 05) ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ, ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದೂಡಲಾಗಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಆಗಸ್ಟ್‌ 11 (ಬುಧವಾರ) ರಿಂದ ಕೊವಿಡ್‌ ಶಿಷ್ಟಾಚಾರದೊಂದಿಗೆ ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯನ್ನು ಕಾಲೇಜಿನ ವೆಬ್‌ಸೈಟ್‌ ಮೂಲಕ ತಿಳಿಸಲಾಗುವುದು. ವಾಹನ ಸೌಲಭ್ಯ ಅಥವಾ ಕೊವಿಡ್‌ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು.