ಎಸ್ಸೆಸ್ಸೆಲ್ಸಿ ಫಲಿತಾಂಶ : ಎಲ್ಲರೂ ಪಾಸ್, ಓರ್ವ ವಿದ್ಯಾರ್ಥಿ ಫೇಲ್

5:10 PM, Monday, August 9th, 2021
Share
1 Star2 Stars3 Stars4 Stars5 Stars
(No Ratings Yet)
Loading...

Nageshಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು  2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಓರ್ವ ವಿದ್ಯಾರ್ಥಿ ಹೊರತಾಗಿ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಿದ್ದಾರೆ ಎಂದು ಹೇಳಿದರು.

ಫಲಿತಾಂಶ ಕುರಿತು ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶೇ. 99.9 ಮಕ್ಕಳು ಪಾಸ್ ಆಗಿದ್ದಾರೆ. ಕರೊನಾ ಹಿನ್ನೆಲೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ನಿರ್ಧರಿಸಿದ್ದೆವು. ಆದರೆ, ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿನಿ ಬದಲಿ ಪರೀಕ್ಷೆ ಬರೆದು ಡಿಬಾರ್ ಆಗಿದ್ದ ಹಿನ್ನೆಲೆಯಲ್ಲಿ ಶೇ.100 ಫಲಿತಾಂಶ ಬಂದಿಲ್ಲ ಎಂದರು.

ಕಳೆದ ಜುಲೈ 29 ಮತ್ತು 31ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 8.71 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.  ಜುಲೈ 19ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆಯಾಗಿತ್ತು. ಜುಲೈ 22ರಂದು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ವಿಷಯಗಳ ಪರೀಕ್ಷೆಗಳು ನಡೆದಿದ್ದವು. ಒಂದೇ ದಿನದಲ್ಲಿ ಮೂರು ವಿಷಯಗಳಿಗೆ ಪರೀಕ್ಷೆ ಇದ್ದರಿಂದ ಪ್ರತೀ ಪ್ರಶ್ನೆಪತ್ರಿಕೆಯೂ ಬಹು ಆಯ್ಕೆ ಉತ್ತರಗಳೊಂದಿಗೆ 40 ಅಂಕಗಳನ್ನ ಹೊಂದಿತ್ತು. ಪರೀಕ್ಷೆಯಲ್ಲಿ ಗ್ರೇಡ್‌ಗಳನ್ನು ನೀಡಲಾಗಿದ್ದು. ಯಾರನ್ನೂ ಅನುತ್ತೀರ್ಣ ಮಾಡಿಲ್ಲ ಎಂದರು.

ಒಟ್ಟು 1,28,931 ಮಕ್ಕಳು A+ ಗ್ರೇಡ್ನಲ್ಲಿ ಪಾಸಾಗಿದ್ದಾರೆ. 2,50,317 ಮಕ್ಕಳು ‘A’ ಗ್ರೇಡ್ ಪಡೆದಿದ್ದಾರೆ. 2,87,694 ಮಕ್ಕಳು ‘B’ ಗ್ರೇಡ್ ಪಡೆದಿದ್ದಾರೆ. 1.13, 610 ಮಕ್ಕಳು ‘C’ ಗೇಡ್ ಪಡೆದಿದ್ದಾರೆ. 157 ಮಂದಿ 625ಕ್ಕೆ 625ಕ್ಕೆ ಅಂಕ ಪಡೆದಿದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ https://sslc.karnataka.gov.in/ ಅಥವಾ http://kseeb.kar.nic.in/ ಇಲ್ಲಿ ಕ್ಲಿಕ್‌ ಮಾಡುವ ಮೂಲಕ ನೋಡಬಹುದು. ವೆಬ್‌ಸೈಟ್‌ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.

ಎಸ್‌ಎಸ್‌ಎಲ್‌ಸಿಗೆ ಸಂಬಂಧಿಸಿದ ಯಾವುದೇ ದೂರು, ಮಾಹಿತಿಗಳು ಬೇಕಿದ್ದರೆ https://sslc.karnataka.gov.in/ ಈ ಲಿಂಕ್‌ ಮೇಲೆ ಕ್ಲಿಕ್ಕಿಸಿ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English