ಬೆಂಗಳೂರು : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.
ಆದೇಶ ಪ್ರಕಟ
ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು.
ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Click this button or press Ctrl+G to toggle between Kannada and English